ಆ.19: ಆಳ್ವಾಸ್‍ನಲ್ಲಿ ವಿಶೇಷ ಉಪನ್ಯಾಸ
ಮೂಡುಬಿದಿರೆ, ಆ.17: ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಆ. 19ರಂದು ಮಧ್ಯಾಹ್ನ 12ಗಂಟೆಗೆ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.
ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಚಟುವಟಿಕೆಗಳನ್ನು ಉದ್ಘಾಟಿಸಿ, ಸಾಂಸ್ಕೃತಿಕ ತುಳುನಾಡು' ಎನ್ನುವ ವಿಷಯ ಕುರಿತು ಮಾತನಾಡಲಿದ್ದಾರೆ.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಅಧ್ಯಕ್ಷತೆ ವಹಿಸಲಿರುವರು ಎಂದು ಕೇಂದ್ರ ಸಂಯೋಜಕ ಡಾ.ಯೋಗೀಶ್ ಕೈರೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story