ಹೈಕೋರ್ಟ್ ಮೆಟ್ಟಿಲೇರಿದ ಕಸಾಪ ತಿದ್ದುಪಡಿ ವಿವಾದ
ಬೆಂಗಳೂರು, ಮಾ.11: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾಕ್ಕೆ ತಿದ್ದುಪಡಿ ತಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಮತ್ತು ಕಾರ್ಯಕಾರಿ ಸಮಿತಿ ಆಡಳಿತಾವಧಿಯನ್ನು 3 ರಿಂದ 5 ವರ್ಷಕ್ಕೆ ವಿಸ್ತರಣೆ ಮಾಡಿಕೊಂಡಿರುವ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ಕಸಾಪ ಅವಧಿ ವಿಸ್ತರಣೆ ಸಂಬಂಧ ಈಗಾಗಲೇ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣ(ಕೆಎಟಿ)ದಲ್ಲಿ ನಡೆದ ವಿಚಾರಣೆ ಪೂರ್ಣಗೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾಗೆ ತಿದ್ದುಪಡಿ ಕಾನೂನಾತ್ಮಕವಾಗಿದೆ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣೇಗೌಡ ಅವರು ಈಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನು ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷನಾಗಿ ನ್ಯಾಯಾಲಯದ ಮೆಟ್ಟಿಲೇರುತ್ತಿಲ್ಲ. ಬದಲಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಒಬ್ಬ ಸದಸ್ಯನಾಗಿ ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ತಿಳಿಸಿದ್ದಾರೆ.
ಹಾಲಿ ಕಾರ್ಯಕಾರಿಣಿ ಸಮಿತಿ ಸದಸ್ಯರ ಅವಧಿ ಕೇವಲ 3 ವರ್ಷ ಈಗಿರುವ ಸದಸ್ಯರು ಕೇವಲ 3 ವರ್ಷಕ್ಕೆ ಮಾತ್ರ ಆಯ್ಕೆಯಾಗಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದ್ದಾರೆ.