ಐರೋಮ್ ಶರ್ಮಿಲಾ ಹದಿನಾರು ವರ್ಷಗಳ ಉಪವಾಸ ಸತ್ಯಾಗ್ರಹ ಅಂತ್ಯ; ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ
ಹೊಸದಿಲ್ಲಿ, ಜು.26: ಕಳೆದ ಹದಿನಾರು ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮಣಿಪುರದ ಉಕ್ಕಿನ ಮಹಿಳೆ ಐರೋಮ್ ಶರ್ಮಿಲಾ ಆಗಸ್ಟ್ 9ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ.
ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರ ಕಾಯ್ದೆ (ಅಫ್ಸ್ಪ)ವನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಶರ್ಮಿಲಾ ಅವರು ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಲು ಬಯಸಿರುವುದಾಗಿ ಮಂಗಳವಾರ ಇಂಫಾಲ್ ಕೋರ್ಟ್ನ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಚನೆ ಹಾಕಿಕೊಂಡಿರುವುದಾಗಿ ಹೇಳಿದ್ದಾರೆ.
2000, ನವೆಂಬರ್ 1ರಂದು ಮಣಿಪುರದ ಇಂಫಾಲ್ ವಿಮಾನ ನಿಲ್ದಾಣದ ಸಮೀಪದ ‘ಮಾಲೋಂ’ ಎಂಬಲ್ಲಿ ಬಸ್ಸಿಗಾಗಿ ಕಾಯುತಿದ್ದ ಹತ್ತು ಜನರನ್ನು ಅಸ್ಸಾಂ ರೈಫಲ್ಸ್ ಯೋಧರು ಗುಂಡಿಕ್ಕಿ ಕೊಂದರು. ಇದನ್ನು ಪ್ರತಿಭಟಿಸಿ ಶರ್ಮಿಲಾ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
Next Story