ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ: ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಮಂಗಳೂರು, ನ.7 : ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81ರನ್ವಯ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಘಟಕ ಎಚ್ಚರಿಕೆ ನೀಡಿದೆ.
ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3 ರಿಂದ 7 ವಷರ್ಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾ ಗುತ್ತಿದೆ. ನವೆಂಬರ್ ತಿಂಗಳಲ್ಲಿ ಕಾನೂನು ಬದ್ಧ ದತ್ತುವನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ.
ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಮಕ್ಕಳ ರಕ್ಷಣಾ ಘಟಕ ಕಚೇರಿಯ ದೂರವಾಣಿ ಸಂಖ್ಯೆ:0824-2440004 ಅಥವಾ ಮಕ್ಕಳ ಸಹಾಯವಾಣಿ 1098 ಅಥವಾ 112 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.