ಬೆಳ್ತಂಗಡಿ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ತಂಗಡಿ, ಜ.19: ಅಕ್ರಮ ದನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು 8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ವಾಜಿದ್ ಪಾಷಾ(54) ಬಂಧಿತ ಆರೋಪಿ. ವಾಜಿದ್ ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಬಂಧಿತನಾದ ಬಳಿಕ ಜಾಮೀನು ಪಡೆದು ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ
ಈತನನ್ನು ಹಾಸನದ ಹೊಳೆನರಸೀಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Next Story