ಅಕ್ರಮ ಮರಳುಗಾರಿಕೆ ಆರೋಪ: 9 ಬೋಟು ವಶಕ್ಕೆ
ಸಾಂದರ್ಭಿಕ ಚಿತ್ರ
ಮಂಗಳೂರು, ಜ.8: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ 9 ದೋಣಿಗಳನ್ನು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಬ್ಲಮೊಗರು ಸಮೀಪ ನದಿಯಲ್ಲಿ ಅಕ್ರಮ ವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಸ್ಥಳದಲ್ಲಿದ್ದ ಸುಮಾರು 13.5 ಲಕ್ಷ ಮೌಲ್ಯದ 9 ಬೋಟು, 2 ಯಂತ್ರ, 3 ಗ್ಯಾಸ್ ಸಿಲಿಂಡರ್, 13 ಪ್ಲಾಸ್ಟಿಕ್ ಬಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್, ಸಿಬ್ಬಂದಿ ಭಾಗವಹಿಸಿದ್ದರು.
Next Story