ಎ.11: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ
ಮಂಗಳೂರು, ಎ.9: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಮಂಗಳೂರು, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರ್ ಘಟಕ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಗಳ ಉದ್ಘಾಟನೆ, ಡಯಾಲಿಸಿಸ್ ಕಟ್ಟಡ, ಶವಗಾರದ ಉದ್ಘಾಟನೆ ಹಾಗೂ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ಕಾಮಗಾರಿ ಶಂಕುಸ್ಥಾಪನಾ ಕಾರ್ಯಕ್ರಮ ಎ.11ರ ಸಂಜೆ 4:30ಕ್ಕೆ ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸ್ಪೀಕರ್ ಯು.ಟಿ. ಖಾದರ್‌ರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story