ಅ.13: ಕಣ್ಣಿನ ಉಚಿತ ತಪಾಸಣಾ ಶಿಬಿರ
ಮಂಗಳೂರು, ಅ.11: ನಗರದ ಪಂಪ್ವೆಲ್ ಬಳಿಯ ಪ್ರಸಾದ್ ನೇತ್ರಾಲಯದಲ್ಲಿ ಲಾಸಿಕ್/ಸ್ಮೈಲ್/ಪಿಅರ್ಕೆ ಲೇಸರ್ ಕಣ್ಣಿನ ಉಚಿತ ತಪಾಸಣೆಯು ಅ.13ರ ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.
ಅತ್ಯಾಧುನಿಕ ಲೇಸರ್ ಚಿಕಿತ್ಸೆಯು 18 ವರ್ಷ ಪ್ರಾಯದಿಂದ 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾಗಿದೆ. ಶಿಬಿರ ದಲ್ಲಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ಸ್ಕ್ಯಾನ್(ಶಸ್ತ್ರ ಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಸೌಲಭ್ಯ ಗಳನ್ನು ಶಿಬಿರದಲ್ಲಿ ಉಚಿತವಾಗಿ ಒದಗಿಸಲಾಗುವುದು. ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲೇಸರ್ ಚಿಕಿತ್ಸೆಯನ್ನು ಶೇ.50 ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 8904486565ನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ಪ್ರಕಟನೆ ತಿಳಿಸಿದೆ.
Next Story