ಅ.3ರಂದು ಬ್ಯಾರಿ ಭಾಷಾ ದಿನಾಚರಣೆ
ಮಂಗಳೂರು, ಸೆ.30: ಅಖಿಲ ಭಾರತ ಬ್ಯಾರಿ ಪರಿಷತ್ ( ರಿ ) ಮಂಗಳೂರು ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠ ಇವರ ಜಂಟಿ ಆಶ್ರಯದಲ್ಲಿ ಅಕ್ಟೊಬರ್ 3, 2023 ರಂದು ಮಧ್ಯಾಹ್ನ 2 ಗಂಟೆಗೆ ಬ್ಯಾರಿ ಭಾಷಾ ದಿನಾಚರಣೆಯನ್ನು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬ್ಯಾರಿ ಭಾಷೆ, ಬ್ಯಾರಿ ಕಲೆ, ಬ್ಯಾರಿ ಸಾಹಿತ್ಯ, ಸಂಸ್ಕೃತಿಯ ಏಳಿಗೆಗಾಗಿ ನಡೆಸಲ್ಪಡುವ ಈ ಸಮಾರಂಭದ ಮುಖ್ಯ ಅತಿಥಿ ಗಳಾಗಿ ಕರ್ನಾಟಕ ಜಾನಪದ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ, ಉದ್ಘಾಟಕರಾಗಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ. ಎ. ಮಹಮ್ಮದ್ ಹನೀಫ್, ವಿಶೇಷ ಆಹ್ವಾನಿತರಾಗಿ ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ. ಅನಸೂಯ ರೈ ಹಾಗೂ ಕವಯಿತ್ರಿ ಆಯಿಷಾ ಯು. ಕೆ. ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷ ತೆಯನ್ನು ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷರಾದ ಯು. ಎಚ್. ಖಾಲಿದ್ ಉಜಿರೆ ವಹಿಸಲಿದ್ದಾರೆ.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದ್ದು ಬ್ಯಾರಿ ಗಾಯನ ಕೂಟವನ್ನು ಏರ್ಪಡಿಸಲಾ ಗಿದೆ ಎಂದು ಅಖಿಲ ಬ್ಯಾರಿ ಪರಿಷತ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠದ ಕಾರ್ಯನಿರ್ವಾಹಣಾಧಿಕಾರಿ ಡಾ. ಸಿದ್ದೀಕ್ ಜಂಟಿಯಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.