ಅ.3: ಅಖಿಲ ಭಾರತ ಬ್ಯಾರಿ ಪರಿಷತ್ನಿಂದ ಭಾಷಾ ದಿನಾಚರಣೆ
ಮಂಗಳೂರು, ಅ.1: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಅ.3ರಂದು ಮಧ್ಯಾಹ್ನ 2:30ಕ್ಕೆ ನಗರದ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಬ್ಯಾರಿ ಭಾಷಾ ದಿನಾಚರಣೆ ನಡೆಯಲಿದೆ.
ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಯು.ಎಚ್. ಖಾಲಿದ್ ಉಜಿರೆ ಅಧ್ಯಕ್ಷತೆ ವಹಿಸಲಿದ್ದು, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಲೇಖಕಿ ರೈಹಾನಾ ವಿ.ಕೆ. ಸಚ್ಚರಿಪೇಟೆ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ಯೂಸುಫ್ ವಕ್ತಾರ್, ಟಿ.ಎಂ.ಶಹೀದ್, ಹಾಜಿ ಎಂ.ಎಚ್.ಮೊಹಿದಿನ್, ಅಬ್ದುಲ್ ಮಜೀದ್ ಸೂರಲ್ಪಾಡಿ, ಡಾ. ಸಿದ್ದೀಕ್ ಅಡ್ಡೂರು, ಅಬ್ದುಲ್ ಲತೀಫ್ ಕಂದಕ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story