ಜ.3ರಂದು ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ
ಕಸಾಪ ಉಳ್ಳಾಲ ಘಟಕ ಅಧ್ಯಕ್ಷ ಧನಂಜಯ ಕುಂಬ್ಳೆ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ (ರಿ.) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಜ.3 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮ್ಮೇಳನ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಕುಮಾರಿ ಫಾತಿಮತ್ ರಫೀದ ಇವರನ್ನು ಆರಿಸಲಾಗಿದೆ ಎಂದು ಉಳ್ಳಾಲ ಕಸಾಪ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಹೇಳಿದ್ದಾರೆ.
ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಬೆಳಗ್ಗೆ 9-30 ಹರೇಕಳ ಗ್ರಾಮ ಪಂಚಾಯತ್ ಆವರಣದಿಂದ ಜಾನಪದ ದಿಬ್ಬಣ ನಡೆಯಲಿದ್ದು ಇದರ ಉದ್ಘಾಟನೆ ಗುಲಾಬಿ ಅಧ್ಯಕ್ಷರು ಹರೇಕಳ ಗ್ರಾಮ ಪಂಚಾಯತ್ ಇವರು ನೆರವೇರಿಸಲಿದ್ದಾರೆ. ಹರೇಕಳ ಹಾಜಬ್ಬ ಭಾಗವಹಿಸಲಿದ್ದಾರೆ. ಸಮ್ಮೇಳನದ ಉದ್ಘಾಟಕರಾಗಿ ವಿಧಾನಸಭಾಧ್ಯಕ್ಷರು ಯು ಟಿ ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ, ಮುಖ್ಯ ಅತಿಥಿಗಳಾಗಿ ಸೌಜನ್ಯ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಚ್ ಆರ್ ಈಶ್ವರ್ , ಮಂಗಳೂರು ದಕ್ಷಿಣ ವಲಯ ಕೆ. ಎನ್. ಆಳ್ವ, ಪ್ರೊ . ಭಾಸ್ಕರ್ ರೈ ಕುಕ್ಕುವಳ್ಳಿ , ಕಡೆಂಜ ಸೋಮ ಶೇಖರ್ ಚೌಟ, ಡಾ. ಧನಂಜಯ ಕುಂಬ್ಳೆ, ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಸುರೇಶ್ ಅಸೈ ಉಷಾಲತಾ ಸಮ್ಮೇಳನ ಸಂಚಾಲಕ ತ್ಯಾಗಮ್ ಹರೇಕಳ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭ ಕಲೆ, ಸಾಹಿತ್ಯ, ಕ್ರೀಡೆ, ಯಕ್ಷಗಾನ, ಸಾಂಸ್ಕೃತಿಕ ಮುಂತಾದ ಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು.
ಸಮ್ಮೇಳನದಲ್ಲಿ ತೋನ್ಸೆ ಪುಷ್ಕಳ ಕುಮಾರ್ ನೇತೃತ್ವದಲ್ಲಿ ವಿದ್ಯಾರ್ಥಿ ಕಾವ್ಯ ವಾಚನ ಗೀತ ಗಾಯನ ಗೋಷ್ಠಿ, ಡಾ.ಭಾಸ್ಕರ್ ರೈ ಕುಕ್ಕುವಳ್ಳಿ ಅಧ್ಯಕ್ಷತೆಯಲ್ಲಿ ನಮ್ಮ ಅಬ್ಬಕ್ಕ ನಾನು ಕಂಡಂತೆ ಎಂಬ ಸಂವಾದಗೋಷ್ಠಿ ನಡೆಯಲಿದೆ. ಅಪರಾಹ್ನ ಶಿಕ್ಷಣ ಮತ್ತು ಮಾಧ್ಯಮ ಕುರಿತ ಚಿಂತನಗೋಷ್ಠಿ ನಡೆಯಲಿದ್ದು ಮಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್, ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್ ಕೊಣಾಜೆ ಇವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಲಿದ್ದಾರೆ.
ಸಂಜೆ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಧನಂಜಯ ಕುಂಬ್ಳೆ ಸಮಾರೋಪ ಭಾಷಣ ಮಾಡಲಿ ದ್ದಾರೆ. ಅತಿಥಿಗಳಾಗಿ ರವೀಂದ್ರ ರೈ ಕಲ್ಲಿಮಾರ್, ವಿಜಯಲಕ್ಷ್ಮಿ ಪ್ರಸಾದ್ ರೈ ಕಲ್ಲಿಮಾರ್, ಅಬ್ದುಲ್ ಮಜೀದ್, ರಾಧಾಕೃಷ್ಣ ರೈ ಧನಪಾಲ್ ಶೆಟ್ಟಿಗಾರ್ ಲಲಿತ ಕಲಾ ಆರ್ಟ್ಸ್ ಮೊದಲಾದವರು ಭಾಗವಹಿಸಲಿದ್ದಾರೆ.
ಉಳ್ಳಾಲ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕವಿಗಳಾಗಿ, ಪ್ರಬಂಧ ಮಂಡಕರಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.
ಪತ್ರಿಕಾ ಗೋಷ್ಠಿಯಲ್ಲಿ ವೀರರಾಣಿ ಅಬ್ಬಕ್ಕ ರಾಷ್ಟೀಯ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.