ಅ.4ರಂದು ಪತ್ರಕರ್ತರೊಂದಿಗೆ ಸ್ನೇಹ ಮಿಲನ ಕಾರ್ಯಕ್ರಮ
ಮಂಗಳೂರು: ಯುನಿವೆಫ್ ಕರ್ನಾಟಕ ಇದರ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಅಂಗವಾಗಿ ಪತ್ರಕರ್ತರೊಂದಿಗೆ ಸ್ನೇಹಮಿಲನ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ ಅ.4ರಂದು ಸಾಯಂಕಾಲ 4.15ಕ್ಕೆ ನಗರ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಹಾಲ್ನಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್.ಬಿ.ಎನ್., ಹಿರಿಯ ಪತ್ರಕರ್ತರಾದ ನವೀನ್ ಸೂರಿಂಜೆ, ರೇಮಂಡ್ ಡಿಕುನ್ಹ ತಾಕೊಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story