ಡಿ.4ರಿಂದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ
ಉಡುಪಿ, ಡಿ.3: ರಂಗಭೂಮಿ ಉಡುಪಿ ವತಿಯಿಂದ ಆಯೋಜಿಸುವ ಈ ಬಾರಿಯ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಡಿ.4ರಂದು ಸಂಜೆ 6ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣಮಂಟಪದಲ್ಲಿ ಉದ್ಘಾಟನೆಗೊಳ್ಳಲಿದೆ. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.
ನಾಟಕ ಸ್ಪರ್ಧೆ ಡಿ.4ರಿಂದ 15ರವರೆಗೆ ಒಟ್ಟು 12 ದಿನ ನಡೆಯಲಿದ್ದು, 12 ನಾಟಕಗಳು ಪ್ರದರ್ಶನಗೊಳ್ಳಲಿವೆ. ಪ್ರತಿದಿನ ಸಂಜೆ 6:30ಕ್ಕೆ ನಾಟಕ ಪ್ರದರ್ಶನ ಪ್ರಾರಂಭಗೊಳ್ಳಲಿದ್ದು, ಬೆಂಗಳೂರಿನಿಂದ ಅತ್ಯಧಿಕ 6 ತಂಡಗಳು ಸ್ಪರ್ಧಿಸಲಿವೆ ಎಂದು ರಂಗಭೂಮಿ ಪ್ರಕಟಣೆ ತಿಳಿಸಿದೆ.
Next Story