ಎ.5-6: ತಿರುವೈಲು ಸರಕಾರಿ ಶಾಲೆಯ 100ರ ಸಂಭ್ರಮ
ಮಂಗಳೂರು, ಎ.2: ವಾಮಂಜೂರು ತಿರುವೈಲಿನ ಸರಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ‘ಶತಮಾನೋತ್ಸವ ಸಂಭ್ರಮ’ ಹಾಗೂ ಶತಮಾನೋತ್ಸವ ಕಟ್ಟಡ ಉದ್ಘಾಟನಾ ಕಾರ್ಯಕ್ರಮವು ಎ.5 ಮತ್ತು 6ರಂದು ಶಾಲಾ ಆವರಣದಲ್ಲಿ ನಡೆಯಲಿದೆ.
ಎ.5ರಂದು ಬೆಳಗ್ಗೆ 9:30ಕ್ಕೆ ಸ್ಪೀಕರ್ ಯು.ಟಿ.ಖಾದರ್ ಶತಮಾನೋತ್ಸವ ಭವನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ (ರಿ) ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶಾಸಕರಾದ ರಾಜೇಶ್ ನಾಯ್ಕ್, ಮಂಜುನಾಥ ಭಂಡಾರಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story