Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಡಕುಟುಂಬಗಳಿಗೆ ವೈಯಕ್ತಿಕ ನೆಲೆಯಲ್ಲಿ...

ಬಡಕುಟುಂಬಗಳಿಗೆ ವೈಯಕ್ತಿಕ ನೆಲೆಯಲ್ಲಿ 600 ಮನೆ ನೀಡಲಾಗುವುದು: ಶಾಸಕ ಅಶೋಕ್ ರೈ ಭರವಸೆ

ವಾರ್ತಾಭಾರತಿವಾರ್ತಾಭಾರತಿ28 Aug 2023 7:03 PM IST
share
ಬಡಕುಟುಂಬಗಳಿಗೆ ವೈಯಕ್ತಿಕ ನೆಲೆಯಲ್ಲಿ 600 ಮನೆ ನೀಡಲಾಗುವುದು: ಶಾಸಕ ಅಶೋಕ್ ರೈ ಭರವಸೆ

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಬಡವರು ಅನ್ನ, ಬಟ್ಟೆ, ಮನೆ, ಬೆಳಕು ಇಲ್ಲದೆ ಕೊರಗಬಾರದು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈಯಕ್ತಿಕ ನೆಲೆಯಲ್ಲಿ 600 ನಿವೇಶನ ನೀಡಲಾಗುವುದು. ಇದಕ್ಕಾಗಿ ವಿಟ್ಲ ಭಾಗದಲ್ಲಿ 5 ಎಕರೆ ಭೂಮಿ ಖರೀದಿ ನಡೆಸಲಾಗಿದೆ. ಪ್ರತೀ ಕುಟುಂಬಕ್ಕೆ 3 ಸೆನ್ಸ್ ವ್ಯಾಪ್ತಿ ಮನೆ ನಿರ್ಮಾಣ ಮಾಡಲಾಗುವುದು. ಇದರ ಜತೆಗೆ ಸರ್ಕಾರದ ವತಿಯಿಂದ ಗ್ರಾಮೀಣ ಭಾಗದಲ್ಲಿ 1 ಸಾವಿರ ಮನೆಗಳ ನಿರ್ಮಾಣಕ್ಕೆ ನಿವೇಶನ ಕಾದಿರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್‍ ಕುಮಾರ್ ರೈ ಹೇಳಿದರು.

ನೂತನವಾಗಿ ನವೀಕರಿಸಲಾದ ಶಾಸಕರ ಕಚೇರಿ ಉದ್ಘಾಟಿಸಿ ಬಳಿಕ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿಗಾಗಿ 970 ಕೋಟಿ ಅನುದಾನ ಮಂಜೂರುಗೊಂಡಿದೆ. ವಿಟ್ಲ ಭಾಗಕ್ಕೆ ರೂ.670 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೊಯಿಲ ಪಶುವೈದ್ಯಕೀಯ ಕಾಲೇಜಿಗೆ ಈಗಾಗಲೇ ಅನುಮೋದನೆ ಸಿಕ್ಕಿರುತ್ತದೆ. 248 ಭೋದಕರು ನೇಮಕಾತಿ ಆದೇಶಕ್ಕೆ ಭರವಸೆ ನೀಡಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಳದ ಅಭಿವೃದ್ಧಿಗಾಗಿ ರೂ.5.6 ಕೋಟಿ ಅನುದಾನ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರೂ.5 ಕೋಟಿ ಮಂಜೂರಾತಿಗೆ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ.

ದಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಇಲಾಖಾಧಿಕಾರಿಗಳು ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುತ್ತಿದ್ದು, ಇದರಿಂದಾಗಿ ಭ್ರಷ್ಟಾಚಾರವನ್ನು ಹಿಂದಿಕ್ಕಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಕಾರ್ಯಗಳು ನಡೆಯುತ್ತಿವೆ. ಪುತ್ತೂರಿನ ಶಾಸಕರ ಕಚೇರಿಯಲ್ಲಿ 7 ಮಂದಿ ಆಪ್ತಸಹಾಯಕರು ನಿತ್ಯ ಉಪಸ್ಥಿತರಿದ್ದು, ವೈದ್ಯಕೀಯ, ಕಂದಾಯ, ನಗರಸಮಸ್ಯೆ ಸೇರಿ ಪ್ರತಿಯೊಂದು ಇಲಾಖೆಗೆ ಸಂಬಂಧಿಸಿ ಜನತೆಯ ಕೆಲಸ ಕಾರ್ಯಗಳನ್ನು ಮಾಡುತ್ತಾರೆ.

ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಮಾತನಾಡಿ, ಪುತ್ತೂರಿನ ಇತಿಹಾಸದಲ್ಲಿ ಶಾಸಕರ ಕಚೇರಿ ಹೇಗಿರಬೇಕು ಎನ್ನುವು ದನ್ನು ತೋರಿಸಿಕೊಟ್ಟ ಶಾಸಕ ಅಶೋಕ್ ಕುಮಾರ್ ರೈ ಅವರು ಅದೇ ರೀತಿಯಲ್ಲಿ ಜನಮೆಚ್ಚುವ ಕೆಲಸವನ್ನು ಮಾಡ ಬೇಕು. ವಿಧಾನಸಭೆಯಲ್ಲಿ ತುಳುವಿನಲ್ಲಿ ಮಾತನಾಡಿ ತುಳುವಿನ ಮೌಲ್ಯವನ್ನು ವಿಶ್ವಕ್ಕೆ ಪಸರಿಸಿದ ಶಾಸಕರಿಂದ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ಶೀಘ್ರದಲ್ಲಿ ನಡೆಯಲಿ. ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವು ಶಾಸಕರ ಸಂಸ್ಕೃತಿಕ ಪ್ರೀತಿಗೆ ಸಾಕ್ಷಿಯಾಗಿದೆ ಎಂದರು.

ಉಪವಿಭಾಗಾಧಿಕಾರಿ ಗಿರೀಶ್ ನಂದನ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಸದಸ್ಯ ಎಂ.ಎಸ್. ಮಹಮ್ಮದ್, ಕಾಂಗ್ರೇಸ್ ಸೇವಾದಳದ ಜಿಲ್ಲಾ ಸಂಘಟಕ ಜೋಕಿಂ ಡಿಸೋಜ, ಜಿಲ್ಲಾಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಡಾ.ರಾಜಾರಾಂ ಬಿ.ಕೆ ಮಾತನಾಡಿದರು. ತಹಶೀಲ್ದಾರ್ ಶಿವಶಂಕರ್, ಶಾಸಕ ಅಶೋಕ್ ಕುಮಾರ್ ರೈ ಅವರ ಪತ್ನಿ ಸುಮಾ ಅಶೋಕ್ ರೈ, ಮಗಳು ರಿಧಿ ರೈ, ಜಿಲ್ಲಾ ಕಾಂಗ್ರೇಸ್ ವಕ್ತಾರ, ಮುರಳೀಧರ ಮಠಂತಬೆಟ್ಟು, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇಂಜಿನಿಯರ್ ಗಳಾದ ರಂಜಿತ್ ಬಂಗೇರ, ಶಮೀರ್ ಮತ್ತು ಚಿದಾನಂದ ಕೆಮ್ಮಾಯಿ ಅವರನ್ನು ಸನ್ಮಾನಿಸಲಾಯಿತು. 150 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಸ್ವಾಗತಿಸಿದರು. ಕೃಷ್ಣಪ್ರಸಾದ್ ಆಳ್ವ ವಂದಿಸಿದರು. ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X