ಕರ್ನಾಟಕ ಗಡಿ ಭಾಗದಲ್ಲಿ ಸೂಕ್ತ ಭದ್ರತಾ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಕೇರಳದಲ್ಲಿ ಸ್ಫೋಟ ಪ್ರಕರಣ
ಮಂಗಳೂರು: ಕೇರಳದ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಸೂಕ್ತ ಭದ್ರತಾ ಕ್ರಮ ಕೈಗೊಳ್ಳಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ ಗಡಿಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಸರಾ ಸಂದರ್ಭ ಬೆದರಿಕೆ ಹಿನ್ನೆಲೆಯಲ್ಲಿ ಮೈಸೂರು, ಕೊಡಗು ಮಂಗಳೂರಿ ನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು ಎಂದರು.
ರಾಜ್ಯ ದಲ್ಲಿ ಸೈಬರ್ ಕ್ರೈಂ ಹೆಚ್ಚಳ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಸಾಫ್ಟ್ ವೇರ್ ಒಂದನ್ನು ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಷನಲ್, ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ನಲ್ಲಿ ಕೊಂಡೊಯ್ಯಲು ಕ್ರಮ ವಹಿಸುತ್ತಿರುವುದಾಗಿ ಪರಮೇಶ್ವರ್ ತಿಳಿಸಿದ್ದಾರೆ.
Next Story