ನ. 24, 25 ರಂದು ಬಂಟ್ವಾಳದಲ್ಲಿ ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ
ಬಂಟ್ವಾಳ : ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ ಎಐಸಿಸಿಟಿಯು ತನ್ನ ಮೊದಲನೇ ರಾಜ್ಯ ಸಮ್ಮೇಳನವನ್ನು ನ. 24, 25 ರಂದು ಬಂಟ್ವಾಳ ತಾಲೂಕು ಬಿ.ಸಿ .ರೋಡಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ನವೆಂಬರ್ 24 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಕೈಕಂಬದಿಂದ ಶ್ರಮಜೀವಿಗಳ ಅಧಿಕಾರದತ್ತ ಜಾಥಾದಿಂದ ಆರಂಭಗೊಳ್ಳಲಿದ್ದು ಡಾ। ಬಿ.ಆರ್. ಅಂಬೇಡ್ಕರ್ ಭವನದಲ್ಲಿ "ಕರ್ನಾಟಕದಲ್ಲಿ ಕ್ರಾಂತಿಕಾರಿ ದುಡಿಯುವ ವರ್ಗದ ಹೋರಾಟ: ಮುಂದಿನ ದಾರಿ" ಬಹಿರಂಗ ಸಭೆ ನಡೆಯಲಿದೆ. ಪ್ರತಿನಿಧಿ ಅಧಿವೇಶನವು ನ. 24 ಮತ್ತು 25 ರಂದು ನಡೆಯಲಿದೆ.
ಈ ಸಮ್ಮೇಳನದಲ್ಲಿ ಎಐಸಿಸಿಟಿಯು ರಾಷ್ಟೀಯ ಕಾರ್ಯದರ್ಶಿ ಕಾಮ್ರೇಡ್ ರಾಜೀವ್ ದಿಮ್ರಿ , ರಾಷ್ಟ್ರೀಯ ಅಧ್ಯಕ್ಷ ಕಾಮ್ರೇಡ್ ಶಂಕರ್ ಹಾಗೂ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ. ಜಾಥಾ ಮತ್ತು ಬಹಿರಂಗ ಸಭೆಗಳಲ್ಲಿ ವಿವಿಧ ಕೇಂದ್ರ ಕಾರ್ಮಿಕ ಸಂಘಟನೆಗಳು, ರೈತ, ದಲಿತ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಎಐಸಿಸಿಯು ನ ಸದಸ್ಯರಾದ ಪೌರಕಾರ್ಮಿಕರು, ಬೀದಿ ವ್ಯಾಪಾರಿಗಳು, ಆಸ್ಪತ್ರೆ ಕಾರ್ಮಿಕರು, ಬಿಸಿ ಊಟ ಕಾರ್ಮಿಕರು, ಆಟೋ ಚಾಲಕರು, ಬೀಡಿ ಕಾರ್ಮಿಕರು, ಎನ್ ಎ ಎಲ್, ಡಿ ಆರ್ ಡಿ ಒ, ಐಟಿಐ ನಂತಹ ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ನೆಪಮಾತ್ರ ಗುತ್ತಿಗೆ ಪದ್ಧತಿ ಅಡಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಫ್ಯಾಕ್ಟರಿ ಕಾರ್ಮಿಕರು, ಹಾಗೂ ವಿವಿಧ ರಂಗದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಎಂದು ಎಐಸಿಸಿಟಿಯು ದ.ಕ ಜಿಲ್ಲಾ ಅಧ್ಯಕ್ಷ ಕಾಮ್ರೇಡ್ ರಾಮಣ್ಣ ವಿಟ್ಲ, ಕಾರ್ಯದರ್ಶಿ ಕಾಮ್ರೇಡ್ ಕೆ.ಇ ಮೋಹನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.