ಆ.17: ಉಸ್ತುವಾರಿ ಸಚಿವರ ದ.ಕ.ಜಿಲ್ಲಾ ಪ್ರವಾಸ
ಮಂಗಳೂರು,ಆ.16: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆ.17ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 10ಕ್ಕೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯುವ ಉಳ್ಳಾಲ ಖಾಝಿ ಸ್ವೀಕಾರ ಕಾರ್ಯಕ್ರಮ, ಮಧ್ಯಾಹ್ನ 12:30ಕ್ಕೆ ಮಾಣಿಲ ಶ್ರೀಧಾಮದ ಬೆಳ್ಳಿ ಹಬ್ಬ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಪರಾಹ್ನ 3ಕ್ಕೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಆರ್‌ಎಪಿಸಿಸಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಮಹಾಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 11:10ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story