Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲಡ್ಕ ಮ್ಯೂಸಿಯಂ ವತಿಯಿಂದ...

ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ10 Feb 2024 3:57 PM IST
share
ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

ಬಂಟ್ವಾಳ : ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಜಪಾನಿನಲ್ಲಿ ನಡೆಯಲಿರುವ 17 ರ ವಯೋಮಾನದ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮ ಕಲ್ಲಡ್ಕ ಮ್ಯೂಸಿಯಂ ಆವರಣದಲ್ಲಿ ನಡೆಯಿತು.

2023-24 ನೇ ಸಾಲಿನಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಡೆದ ಹ್ಯಾಂಡ್ ಬಾಲ್ ಸ್ಪರ್ಧೆಗಳಲ್ಲಿ ವಿಜೇತರಾಗಿ ಇದೀಗ ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಬಂಟ್ವಾಳ ತಾಲೂಕಿನ ಅಮ್ಟೂರು ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮೊಹಮ್ಮದ್ ಅಝೀಂ ಬಿ., ಮೊಹಮ್ಮದ್ ಮಸ್ಕೂರ್, ಸೃಜನ್, ಲಕ್ಷತ್ ಎಚ್, ಮೊಹಮ್ಮದ್ ಫಾಝ್ ಹಾಗೂ ಇವರಿಗೆ ತರಭೇತು ನೀಡಿದ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸಮಾರಂಭದಲ್ಲಿ ಮುಖ್ಯ ಭಾಷಣಗೈದ ಬಿ.ಮೂಡ ಸರಕಾರಿ ಪ.ಪೂ.ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ ಯಾವುದೇ ಸಾಧನೆ ಮಾಡಿದ ಸಾಧಕನಿಗೆ ತನ್ನ ಊರಿನಲ್ಲಿ ಸಿಗುವ ಸನ್ಮಾನ ಆತನಿಗೆ ದೊರಕುವ ಬಹು ದೊಡ್ಡ ಪಾರಿತೋಷಕವಾಗಿದೆ, ಪ್ರತಿಯೊಂದು ಮಕ್ಕಳಲ್ಲೂ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಹಾಗೂ ಶಿಕ್ಷಕರಿಂದ ಆಗಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಮಾತನಾಡಿ ಹ್ಯಾಂಡ್ ಬಾಲ್ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ವಿಶೇಷ ವಸ್ತು ಸಂಗ್ರಹದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮೂರಿನ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಕಲ್ಲಡ್ಕ ಮ್ಯೂಸಿಯಂ ನ ಸಂಸ್ಥಾಪಕ ಹಾಜಿ ಮುಹಮ್ಮದ್ ಯಾಸಿರ್ ಅವರ ಸಾಧನೆಯ ಬಗ್ಗೆ ಕೊಂಡಾಡಿದರು.

ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ, ಕರಿಂಗಾನ ಚರ್ಚ್ ನ ಧರ್ಮಗುರು ರೆ.ಫಾ. ಕಿರಣ್ ಮ್ಯಾಕ್ಸಿಂ ಪಿಂಟೋ, ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಯಹ್ಯಾ ತಂಙಳ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಮಾತನಾಡಿ ಶುಭ ಹಾರೈಸಿದರು.

ಕಲ್ಲಡ್ಕ ಕೆ.ಟಿ.ಹೋಟೇಲ್ ಮಾಲಕ ರಾಜೇಂದ್ರ ಹೊಳ್ಳ, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಹೈದರ್, ಹಜಾಜ್ ಸಮೂಹ ಸಂಸ್ಥೆಯ ಇಮ್ತಿಯಾಝ್ ಗೋಳ್ತಮಜಲು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಝಕರಿಯಾ ಕಲ್ಲಡ್ಕ, ಕಲ್ಲಡ್ಕದ ತ್ರಿವರ್ಣ ಸಂಗಮ ಹಾಗೂ ಝಮಾನ್ ಬಾಯ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಶೆಟ್ಟಿ ಹ್ಯಾಂಡ್ ಬಾಲ್ ಕ್ರೀಡೆ ಹಾಗೂ ಕ್ರೀಡಾಪಟುಗಳ ಸಾಧನೆಯ ಬಗ್ಗೆ ವಿವರಿಸಿದರು. ಕಲ್ಲಡ್ಕ ಮ್ಯೂಸಿಯಂ ಸಂಸ್ಥಾಪಕ ಯಾಸಿರ್ ಕಲ್ಲಡ್ಕ ಸ್ವಾಗತಿಸಿ, ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X