ಬಂಟ್ವಾಳ: ಬೈಕ್ ಗಳ ನಡುವೆ ಅಪಘಾತ; ಬಾಲಕಿ ಮೃತ್ಯು
ಸವಾರರಿಬ್ಬರಿಗೆ ಗಾಯ
ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ.
ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹ್ಮಾನ್ ಅವರು ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story