ಬಂಟ್ವಾಳ : ಕೊಟ್ಯಾಂತರ ರೂ. ಮೌಲ್ಯದ ಅಕ್ಕಿ ಅವ್ಯವಹಾರ ಪ್ರಕರಣ; ದಾಸ್ತಾನು ಕೇಂದ್ರಕ್ಕೆ ರಾಜ್ಯ ಮಟ್ಟದ ಅಧಿಕಾರಿಗಳು ಭೇಟಿ
ಬಂಟ್ವಾಳ : ಕೊಟ್ಯಾಂತರ ರೂ. ಮೌಲ್ಯದ ಅಕ್ಕಿಯಲ್ಲಿ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಸಿರೋಡಿನ ತಲಪಾಡಿಯಲ್ಲಿರುವ ಅಕ್ಕಿ ಇರುವ ಗೊಡೌನ್ ಗೆ ರಾಜ್ಯ ಮಟ್ಟದ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಆಹಾರ ನಿಗಮದಿಂದ ಬಡವರಿಗಾಗಿ ನೀಡುವ ಅಕ್ಕಿಯಲ್ಲಿ ಕೋಟ್ಯಾಂರ ರೂ ಮೌಲ್ಯದ ಅಕ್ಕಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ದೂರಿನ ಹಿನ್ನೆಲೆಯಲ್ಲಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಅವರಿಗೆ ನೀಡಿದ ದೂರಿನಂತೆ ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು.
ಕೆ.ಎಫ್.ಸಿ.ಎಸ್.ಸಿ.ಯ ಜನರಲ್ ಮ್ಯಾನೇಜರ್ ಪ್ರಸನ್ನ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿ ಅನುರಾಧ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ತಹಶಿಲ್ದಾರ್ ಎಸ್.ಬಿ.ಕೂಡಲಗಿ, ನಗರ ಪೊಲೀಸ್ ಠಾಣಾಧಿಕಾರಿ ರಾಮಕೃಷ್ಣ ಉಪಸ್ಥಿತರಿದ್ದರು.