ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ; ಇಬ್ಬರ ಬಂಧನ
ಬಂಟ್ವಾಳ : ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ.
ಬಂಧಿತ ಆರೋಪಿಗಳನ್ನು ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ.
ನಂದಾವರ ಶಾಲಾ ಬಳಿ ಈ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೋಲೀಸ್ ಠಾಣಾಧಿಕಾರಿ ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ದೃಢಪಟ್ಟಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Next Story