ಬಂಟ್ವಾಳ : ಜಮೀಯ್ಯತುಲ್ ಫಲಾಹ್ ನಿಂದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಮೆಲ್ಕಾರ್ ಎಂ.ಎಚ್. ಕಂಪೌಂಡ್ ನಲ್ಲಿ ಶುಕ್ರವಾರ ನಡೆಯಿತು.
ಈ ಸಂದರ್ಭ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು ಮಾತನಾಡಿ, ನಾವೆಲ್ಲರೂ ಭಾರತೀಯರು, ಸಾಮರಸ್ಯ, ಸೌಹಾರ್ದತೆ, ಐಕ್ಯತೆ ಇರಬೇಕು. ನಮಗೆ ಸಂವಿಧಾನ ಹಲವಾರು ಅವಕಾಶಗಳನ್ನು ನೀಡಿದೆ. ಬಡವ-ಶ್ರೀಮಂತರನ್ನು ಒಂದೇ ರೀತಿ ನೋಡಿದೆ ಎಂದು ಹೇಳಿದರು.
ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೆ.ಕೆ. ಶಾಹುಲ್ ಹಮೀದ್ ಸಂವಿಧಾನ ಪೀಠಿಕೆ ವಾಚಿಸಿದರು. ಸಭಿಕರು ವಾಚಿಸಿ ಪ್ರತಿಜ್ಞೆ ಕೈಗೊಂಡರು.
ಇದೇ ವೇಳೆ ಬಂಟ್ವಾಳ ಸ್ಪೀಚ್ ವೀವರ್ಸ್ ಕ್ಲಬ್ (ಟೋಸ್ಟ್ ಮಾಸ್ಟರ್ಸ್) ಅಧ್ಯಕ್ಷರಾಗಿ ಆಯ್ಕೆಯಾದ ಅಹ್ಮದ್ ಮುಸ್ತಫಾ ಗೋಳ್ತಮಜಲು ಅವರನ್ನು ಅಭಿನಂದಿಸಲಾಯಿತು.
ಪೂರ್ವಾಧ್ಯಕ್ಷರುಗಳಾದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಎಸ್.ಎಂ. ಮಹಮ್ಮದ್ ಅಲಿ ಶಾಂತಿಅಂಗಡಿ, ನೋಟರಿ ಅಬೂಬಕರ್ ವಿಟ್ಲ, ಎಫ್.ಎಂ.ಬಶೀರ್ ಫರಂಗಿಪೇಟೆ, ಆಸಿಫ್ ಇಕ್ಬಾಲ್ ಫರಂಗಿಪೇಟೆ, ಹಾಜಿ ಎ.ಉಸ್ಮಾನ್ ಕರೋಪಾಡಿ, ಸುಲೈಮಾನ್ ಸೂರಿಕುಮೇರು, ಪಿ. ಮಹಮ್ಮದ್ ಪಾಣೆಮಂಗಳೂರು, ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಉಪಾಧ್ಯಕ್ಷರಾದ ಲತೀಫ್ ನೇರಳಕಟ್ಟೆ, ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಪದಾಧಿಕಾರಿಗಳಾದ ಬಿ.ಎಂ. ಅಬ್ಬಾಸ್ ಅಲಿ ಬೋಳಂತೂರು, ಹಕೀಂ ಕಲಾಯಿ ಮೊದಲಾದವರು ಉಪಸ್ಥಿತರಿದ್ದರು.