ಬಂಟ್ವಾಳ: ಅಕ್ರಮ ಮದ್ಯ ಮಾರಾಟ; ಆರೋಪಿಯ ಬಂಧನ
ಬಂಟ್ವಾಳ: ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ.
ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಅನಂತಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿರುವ ಮದಿರಾ ವೈನ್ ಶಾಫ್ ನಿಂದ ಮದ್ಯವನ್ನು ಹೆಚ್ಚಿನ ಬೆಲೆ ಮಾರಾಟ ಮಾಡುವ ಉದ್ದೇಶದಿಂದ ಖರೀದಿಸಿರುವುದಾಗಿ ಒಪ್ಪಿಕೊಂಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.
Next Story