ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ NSS ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) NSS ಘಟಕದ ವತಿಯಿಂದ ಉಳ್ಳಾಲ ಬೀಚ್ ನಲ್ಲಿ “ಕ್ಲೀನ್ ಬೀಚ್ ಮತ್ತು ಗ್ರೀನ್ ಬೀಚ್” (Clean Beach and Green Beach) ʼಆಶಯದೊಂದಿಗೆ ಬೀಚ್ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದೆ.
ಈ ಕಾರ್ಯಕ್ರಮವು ಪ್ರಕೃತಿಯನ್ನು ಗೌರವಿಸುವ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಐಟಿಯ ಪ್ರಾಂಶುಪಾಲರಾದ ಡಾ.ಎಸ್.ಐ.ಮಂಜುರ್ ಬಾಷಾ, ಸ್ವಚ್ಛತೆ ಮತ್ತು ನೈರ್ಮಲ್ಯದ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಬಗೆಗಿನ ಮಹತ್ವವನ್ನು ಹೇಳಿದ್ದಾರೆ.
ಬಿಐಟಿಯ ವಿವಿಧ ವಿಭಾಗದ ಮುಖ್ಯಸ್ಥರಾದ ಪ್ರೊ.ಮಹಮ್ಮದ್ ಸಿನಾನ್, ಡಾ.ವಸಂತಕುಮಾರ್, ಡಾ.ಅಂಜುಮ್ ಖಾನ್ ಮತ್ತು ಪ್ರೊ.ಪೃಥ್ವಿರಾಜ್, ಬಿಐಟಿ ಪಾಲಿಟೆಕ್ನಿಕ್ ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ಅಧಿಕಾರಿ ಡಾ. ಮೊಹಮ್ಮದ್ ಕಫೀಲ್ ದೆಲ್ವಿ, ವಿವಿಧ ವಿಭಾಗದ ಎನ್ ಎಸ್ ಎಸ್ ಸಂಯೋಜಕರು, ಎನ್ ಎಸ್ ಎಸ್ ವಿದ್ಯಾರ್ಥಿಗಳು ಸೇರಿದಂತೆ 300ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.