ಬೆಳ್ತಂಗಡಿ | 7ನೇ ತರಗತಿ ಬಾಲಕ ಆತ್ಮಹತ್ಯೆ

ಬೆಳ್ತಂಗಡಿ: 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಫೆ.18ರಂದು ತಾಲೂಕಿನ ತಣ್ಣೀರು ಪಂಥ ಗ್ರಾಮದಲ್ಲಿ ನಡೆದಿದೆ.
ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಫೆ.18ರಂದು ರಾತ್ರಿ ಮಲಗುವ ಕೋಣೆಯಲ್ಲಿ ಒಳಗಿನಿಂದ ಚಿಲಕ ಹಾಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯವರು ಇದನ್ನು ಗಮನಿಸಿದ್ದು ಕೊಠಡಿಯ ಬಾಗಿಲನ್ನು ಒಡೆದು ಬಾಲಕನನ್ನು ಕೆಳಗಿಳಿಸಿ ಆಸ್ಪತ್ರಗೆ ಕೊಂಡೊಯ್ದರೂ ಆವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಸಂಬಂಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story