Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ : ಪ್ರೇಮ ವೈಫಲ್ಯ; ಕಾಲೇಜು...

ಬೆಳ್ತಂಗಡಿ : ಪ್ರೇಮ ವೈಫಲ್ಯ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಯುವಕನ ವಿರುದ್ಧ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ28 Nov 2024 2:31 PM IST
share
ಬೆಳ್ತಂಗಡಿ : ಪ್ರೇಮ ವೈಫಲ್ಯ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

ಪ್ರಕರಣದ ವಿವರ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ವಿದ್ಯಾರ್ಥಿನಿಯು ತನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ತಾಯಿಯೊಂದಿಗೆ ಹೇಳಿದ್ದಳು.

ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ. ಸಾಯುವುದಾದರೆ ಸಾಯಿ. ಎಂದು ಹೇಳಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ನೊಂದ ವಿದ್ಯಾರ್ಥಿನಿ ನ.20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿದ್ದಾಳೆ ಎನ್ನಲಾಗಿದೆ.

ವಿಚಾರ ತಿಳಿದ ಕೂಡಲೇ ಆಕೆಯನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಮನೆಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ನ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಪ್ರವೀಣ್ (22) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ಬೆಳ್ತಂಗಡಿ ಪೊಲೀಸರು‌ BNS 2023 (u/s-107) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯುವಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಕರಣದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಗೆಳೆತನ: ಕಳೆದ ಏಂಟು ತಿಂಗಳ ಹಿಂದೆ ವಿದ್ಯಾರ್ಥಿನಿ ಹಾಗೂ ಯುವಕನ ನಡುವೆ ಇನ್ಟಾಗ್ರಾಂ ಮೂಲಕ ಪರಿಚಯವಾಗಿದೆ‌. ಬಳಿಕ ಮದುವೆಯಾಗುವುದಾಗಿ ವಿದ್ಯಾರ್ಥಿನಿಗೆ ಯುವಕ ಕೊರಗಜ್ಜನ ಮೇಲೆ ಪ್ರಮಾಣ ಮಾಡಿ ಹೇಳಿದ್ದ ಎನ್ನಲಾಗಿದೆ. ಈ ವಿಚಾರವನ್ನು ತನ್ನ ತಾಯಿ ಜೊತೆ ಮೂರು ತಿಂಗಳ ಹಿಂದೆ ವಿದ್ಯಾರ್ಥಿನಿ ತಿಳಿಸಿದ್ದಾಳೆ. ನನಗೆ ಆತನ ಜೊತೆ ಮದುವೆ ಮಾಡಿಕೊಡಿ ಎಂದು ತಾಯಿ ಬಳಿ ಕೇಳಿದ್ದಾಳೆ.ಈ ವಿಚಾರವಾಗಿ ತಾಯಿ ನಿನಗೆ ವಯಸ್ಸು ಆಗಿಲ್ಲ ನಿನ್ನ ವಿದ್ಯಾಭ್ಯಾಸ ಮುಗಿದ ಬಳಿಕ ಮದುವೆ ಮಾಡುವ ಎಂದು ಬುದ್ದಿ ಮಾತು ಹೇಳಿದ್ದಾರೆ‌. ಯುವಕನ ಜೊತೆ ತಾಯಿಗೆ ಮಾತನಾಡಲು ಮಗಳು ಹೇಳಿದ್ದರಿಂದ ಎರಡು ಬಾರಿ ಮೊಬೈಲ್ ನಲ್ಲಿ ಮಾತಾನಾಡಿದ್ದು ವಯಸ್ಸು ಆಗಲಿ ಆಮೇಲೆ ಮದುವೆ ಮಾಡುವ ಎಂದಿದ್ದಾರೆ. ಅದಕ್ಕೆ ತಾಯಿ ಓಕೆ ಅಂದು ಸುಮ್ಮನಿದ್ದರು. ಬಳಿಕ ಇವರಿಬ್ಬರು ದೇವಸ್ಥಾನ, ಇತರ ಕಡೆ ರಜೆ ಸಮಯದಲ್ಲಿ ತಿರುಗಾಡಿದ್ದಾರೆ ಅದಕ್ಕೆ ಸಾಕ್ಷಿಯಂತೆ ಜೊತೆಯಲ್ಲಿ ಸೆಲ್ಫಿ, ಫೋಟೋ ಕೂಡ ತೆಗೆದುಕೊಂಡಿದ್ದಾರೆ.‌ ಇದು ಮೊಬೈಲ್ ನಲ್ಲಿದೆ. ಮೃತಪಟ್ಟ ವಿದ್ಯಾರ್ಥಿನಿಯ ತಾಯಿ ಹೇಳುವ ಪ್ರಕಾರ ಮಗಳ ಹುಟ್ಟುಹಬ್ಬ ಕಳೆದ ತಿಂಗಳು 23 ರಂದು ಇದ್ದು ,ಈ ವೇಳೆ ಯುವಕ ಮಗಳ ಫೋಟೋ ಸ್ಟೇಟಸ್ ಹಾಕಿ ಶುಭಾಶಯ ಸಲ್ಲಿಸಿದ್ದ. ಅದನ್ನು ಆತನ ಸಂಬಂಧಿಗಳು ನಮ್ಮ ದಿಡುಪೆಯಲ್ಲಿದ್ದು ಅವರು ನೋಡಿದ್ದಾರೆ. ಅವರು ಬಡ ಕುಟುಂಬದ ಸಂಬಂಧ ಬೇಡ ಅಂತ ಯುವಕನ ಮನೆಯವರಲ್ಲಿ ಹೇಳಿ ಸಂಬಂಧ ಮುರಿಯುವಂತೆ ಮಾಡಿದ್ದಾರೆ. ಹಾಗಾಗಿ ಯುವಕ ಮಗಳ ಜೊತೆ ಮದುವೆಯಾಗುವುದಿಲ್ಲ ಎಂದು ಕಳೆದ 20 ದಿನದ ಹಿಂದೆ ಹೇಳಿದ್ದ ಎಂದಿದ್ದಾರೆ

ವಿದ್ಯಾರ್ಥಿನಿ ಮೊಬೈಲ್ ನಲ್ಲಿದೆ ನಿಗೂಢ ರಹಸ್ಯಗಳು: ಇನ್ನೂ ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಮನೆಮಂದಿ ಆಕೆಯ ಬಳಿಯಿಂದ ಮೊಬೈಲ್ ಪರಿಶೀಲನೆ ಮಾಡಿದ್ದು ಈ ವೇಳೆ ಅನೇಕ ಇಬ್ಬರ ನಡುವೆ ನಡೆದ ಮೆಸೇಜ್, ವಿಡಿಯೋ ಕರೆ ಮಾಡಿದ ಚಾಟ್ ಲಿಸ್ಟ್ ,ತಿರುಗಾಡಿದ ಫೋಟೋಗಳು ಹಾಗೂ ಇನ್ನಿತರ ವಿಚಾರಗಳು ಪತ್ತೆಯಾಗಿದೆ. ವಿದ್ಯಾರ್ಥಿನಿ ಜೊತೆ ಯುವಕ ನ.25 ದವರೆಗೂ ಸಂಪರ್ಕದಲ್ಲಿದ್ದು ಮೆಸೇಜ್ ಮೂಲಕ ಮಾತಾನಾಡಿದ್ದಾರೆ. ಈ ವೇಳೆ ನನಗೆ ನೀನು ಬೇಕು ,ನನ್ನಿಂದ ನಿನ್ನನ್ನು ಮರೆತುಬೀಡಲು ಸಾಧ್ಯವಾಗುತ್ತಿಲ್ಲ, ನನ್ನನ್ನು ಮದುವೆಯಾಗು ಎಂದು ವಿದ್ಯಾರ್ಥಿನಿ ಗೋಳಾಡಿದ್ದಾಳೆ ಇದೆಲ್ಲ ಮೆಸೇಜ್ ಹಾಗೆಯೇ ಮೊಬೈಲ್ ನಲ್ಲಿದೆ. ಇದೀಗ ನನ್ನ ಮಗಳ ಸಾವಿಗೆ ನ್ಯಾಯ ಬೇಕು ಅಂತಾ ವಿದ್ಯಾರ್ಥಿನಿ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X