ಬೆಳ್ತಂಗಡಿ: ಸೆ. 3ರಂದು ಸೌಜನ್ಯ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಕಡೂರು-ಬಂಟ್ವಾಳ ಮಾರ್ಗದಲ್ಲಿ ಬದಲಾವಣೆ
ಬೆಳ್ತಂಗಡಿ; ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ತನಿಖೆಗೆ ಒತ್ತಾಯಿಸಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ನೇತೃತ್ವದಲ್ಲಿ ಸೆ. 3ರಂದು ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆ ಹಿನ್ನಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯುರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್ನಲ್ಲಿ ಆದ್ರುಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್ ನಿಂದ ಕನ್ನಾಜೆ, ಪಡ್ಲಾಡಿ, ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.