ಬೆಳ್ತಂಗಡಿ: ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಮೃತ್ಯು
ಬೆಳ್ತಂಗಡಿ: ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜ.15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾನ್ (7) ಮೃತಪಟ್ಟ ಬಾಲಕ.
ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲೆಯ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story