ಬೆಳ್ತಂಗಡಿ: ಮಣಿಪುರ ದೌರ್ಜನ್ಯಗಳನ್ನು ವಿರೋಧಿಸಿ ಕ್ರೈಸ್ಥ ಸಂಘಟನೆಗಳಿಂದ ಪ್ರತಿಭಟನೆ
ಬೆಳ್ತಂಗಡಿ; ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ವಿರೋಧಿಸಿ ಸಮಾನ ಮನಸ್ಕ ಕ್ರೈಸ್ಥ ಸಂಘಟನೆಗಳ ನೇತೃತ್ವದಲ್ಲಿಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಮಿನಿ ವಿಧಾನ ಸೌಧದ ಎದುರು ಸಮಾರೋಪಗೊಂಡಿದೆ.
ಪ್ರತಿಭಟನೆಯನ್ನುದ್ದೇಶಿಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷರಾದ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರು ದೇಶದಲ್ಲಿ ಗೌರವ ಯುತವಾಗಿ ಬದುಕಲು ಪ್ರತಿಯೊಬ್ಬರಿಗೂ ಅವಕಾಶ ನೀಡಬೇಕು. ಕೇಂದ್ರ ಸರಕಾರ ಪ್ರಜೆಗಳಿಗೆ ರಕ್ಷಣೆ ನೀಡುವಲ್ಲಿ ಎಡವಿದೆ. ತಕ್ಷಣ ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು ಎಂದರು.
ಪ್ರತಿಭಟನೆಯನ್ನು ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಜಿ.ಪಂ ಮಾಜಿ ಉಪಾದ್ಯಕ್ಷೆ ಶಾಲೆಟ್ ಪಿಂಟೋ, ಸುಪ್ರಿಯಾ ಮಾತನಾಡಿದರು. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಕೊಡೆಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Next Story