ಬರಕಾ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಕ್ತದಾನ ಶಿಬಿರ
ಮಂಗಳೂರು, ಡಿ.9: ಅಡ್ಯಾರು ಸಮೀಪದ ಬರಕಾ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಂಗಳೂರು ಇದರ ಸಹಯೋಗದಲ್ಲಿ ಇಂದು ರಕ್ತದಾನ ಶಿಬಿರ ನಡೆಯಿತು.
ಶಿಬಿರಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ಬರಕಾ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಮುಹಮ್ಮದ್ ಅಶ್ರಫ್, ಕೆ.ಎಂಸಿ ಮಂಗಳೂರು ಇದರ ಅಸೋಸಿಯೆಟ್ ಪ್ರೊಫೆಸರ್ ಡಾ.ಶೆರಿಲ್ ಸಾರಾ ಫಿಲಿಪ್ಪೋಸ್, ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಅಧ್ಯಕ್ಷ ಶಾಹುಲ್ ಹಮೀದ್, ಹೋಪ್ ಫೌಂಡೇಶನ್ ಅಧ್ಯಕ್ಷ ಸೈಫ್ ಸುಲ್ತಾನ್, ಟಿ.ಆರ್.ಎಫ್. ಅಧ್ಯಕ್ಷ ರಿಯಾಝ್ ಅಹ್ಮದ್, ಜಮೀಯ್ಯತುಲ್ ಫಲಾಹ್ ಕಾರ್ಯದರ್ಶಿ ಕಾಸಿಂ ಬಾರ್ಕೂರ್, ಜಮೀಯ್ಯತುಲ್ ಫಲಾಹ್ ಉಡುಪಿ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್, ಅಡ್ಯಾರ್ ಆಟೋ ಅಸೋಸಿಯೇಶನ್ ನ ವಿಠ್ಠಲ್ ಹಾಗೂ ಅಬ್ದುಲ್ ಸಲಾಂ, ಹರೇಕಳ ಆಟೋ ಅಸೋಸಿಯೇಶನ್ ನ ಆಸಿಫ್ ಅಹ್ಮದ್ ಹಾಗೂ ಡಾ.ಅನೀಸ್ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು, ಆಟೋ ಚಾಲಕರು, ಹಳೆ ವಿದ್ಯಾರ್ಥಗಳು, ಪೋಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ರಕ್ತದಾನ ನೀಡಿದರು.