ʼಕಡಲಾಚೆಯ ರಮ್ಯ ನೋಟ ದುಬಾಯಿʼ ಕೃತಿ ಬಿಡುಗಡೆ

ಮಂಗಳೂರು: ಕೊಡಗಿನ ಚಿತ್ರ ಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿ ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು.
ಯುಎಇ ಬಂಟ್ಸ್ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ ಕೃತಿಯ ಲೋಕಾರ್ಪಣೆ ಮಾಡಿದರು. ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣ ಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಿದೆ. ಎಂದು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಲೇಖಕ ಬಿ. ಕೆ. ಗಣೇಶ್ ರೈ ಅವರು ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಯು ತನ್ನ ಕನಸಿನ ಕಲ್ಪನೆಯ ಕೂಸು ಆಗಿದೆ ಎಂದರು.
ಮುನ್ನುಡಿ ಬರೆದಿರುವ ಡಾ. ಅರುಣಾ ನಾಗರಾಜ್ ಕೃತಿಯಲ್ಲಿರುವ ಒಂದೊಂದು ಲೇಖನಗಳು ದುಬೈಯ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ. ಕೈಯಲ್ಲಿ ಈ ಒಂದು ಕೃತಿ ಇದ್ದರೆ ಸಮಗ್ರ ದುಬಾಯಿಯನ್ನು ಸಂಪೂರ್ಣವಾಗಿ ಪ್ರವಾಸ ಮಾಡಿಕೊಂಡು ಬಂದಿರುವ ಅನುಭವಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸರ್ವೋತ್ತಮ ಶೆಟ್ಟಿ ಮಾತನಾಡಿ ದುಬಾಯಿ ಸಂಪೂರ್ಣ ಚಿತ್ರಣವಿರುವ ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಯನ್ನು ಪ್ರಕಟಿಸಿರುವುದು ದುಬಾಯಿಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗೆ ಸಂದಿರುವ ಗೌರವ ಎಂದು ಗಣೇಶ್ ರೈ ಸಾಧನೆಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಅಮೃತ ಪ್ರಕಾಶನದ ಪ್ರಕಾಶಕರಾದ ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಕೃತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ತಮ್ಮ ಪ್ರಕಾಶನದ ೪೨ನೇಯ ಸರಣಿ ಕೃತಿ ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿ ಆಗಿದೆ ಎಂದರು.
ಸುರೇಖಾ ಯಳವಾರ ಕಾರ್ಯಕ್ರಮ ನಿರೂಪಿಸಿದರು.