ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ
ಮಂಗಳೂರು: ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ 21ನೇ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭ ರಾಜ್ಯ ಗ್ಯಾರಂಟಿ ಯೋಜನೆ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.,ಜಿಪಂ ಸಿಇಒ ಡಾ.ಆನಂದ್ ಕೆ., ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್ ಕುಮಾರ್, ಡಿಸಿಎಫ್ ಆಂಟನಿ ಮರಿಯಪ್ಪ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಅರುಣಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.
Next Story