ದ.ಕ. ಕಾಂಗ್ರೆಸ್ನಿಂದ ಸಂಭ್ರಮಾಚರಣೆ
ಮಂಗಳೂರು : ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದರೂ ಮುಂದಿನ ವಿಚಾರಣೆ ತನಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸೋಮವಾರ ವಿಚಾರಣೆ ನಡೆಸಿದ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಕ್ಷದ ಧುರೀಣರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೆ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ಮತ್ತಿತರರು ಉಪಸ್ಥಿತರಿದ್ದರು.
Next Story