Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿ: ಪ್ಲಾಸ್ಟಿಕ್ ತ್ಯಾಜ್ಯ...

ಕರಾವಳಿ: ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ

ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ ಖಂಡ್ರೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ8 Aug 2023 7:54 PM IST
share
ಕರಾವಳಿ: ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ

ಉಡುಪಿ, ಆ.8: ಕಡಲನ್ನು ಸೇರುತ್ತಿರುವ ಮತ್ತು ಕಡಲತೀರ ಆವರಿಸುತ್ತಿ ರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸಂರಕ್ಷಿ ಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು - ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ರಾಜ್ಯ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿ.ಮೀ. ಉದ್ದದ ರಾಜ್ಯ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆ, ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.

ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು, ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು.

ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.

ಬ್ಲೂ ಪ್ಯಾಕ್ ಯೋಜನೆಯ ಒಟ್ಟು ಮೊತ್ತ 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70 ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರಕಾರ ಉಳಿದ ಶೇ.30ರಷ್ಟನ್ನು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿ ಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯಮೋಹನ್ ರಾಜ್ ಮತ್ತಿತರರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X