ಒಗ್ಗಟ್ಟಿನ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ: ಯು.ಟಿ ಖಾದರ್
ಉಳ್ಳಾಲ : ನಾವು ಮೊದಲು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಆಗಬೇಕು. ದೇಶ ಅಭಿವೃದ್ಧಿ ಕಾಣಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಉಳ್ಳಾಲ ತಾಲೂಕು ಮಟ್ಟದ 78 ನೇಸ್ವಾತಂತ್ರ್ಯ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರು ದೇಶದ ಬೆಳವಣಿಗೆ ಬಗ್ಗೆ ಚಿಂತನೆ ನಡೆಸಿದ್ದರು. ಮಹಾತ್ಮಗಾಂಧೀಜೀಯವರ ನೇತೃತ್ವದಲ್ಲಿ ಬಹಳಷ್ಟು ಮಂದಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ. ಅವರನ್ನು ಸ್ಮರಿಸುವ ಕೆಲಸ ನಾವು ಮಾಡಬೇಕು ಎಂದರು.
ಸ್ವಾತಂತ್ರ್ಯ ಹೋರಾಟಗಾರರು ದೇಶಪ್ರೇಮ, ಏಕತೆ ಬೆಳೆಸಿ ಒಗ್ಗಟ್ಟಾಗಿ ಹೋರಾಟ ಮಾಡಿದ ಕಾರಣ ನಮಗೆ ಸ್ವಾತಂತ್ರ್ಯ ಗಳಿಸಲು ಸಾಧ್ಯ ಆಗಿದೆ. ನಾವು ಏಕತೆ, ಒಗ್ಗಟ್ಟು ಬೆಳೆಸಿಕೊಂಡರೆ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಯಾವ ದೇಶದಲ್ಲಿ ಒಗ್ಗಟ್ಟು ಇದೆಯೋ ಆ ದೇಶ ಅಭಿವೃದ್ಧಿ ಹೊಂದುತ್ತದೆ. ವಿದ್ಯಾರ್ಥಿಗಳು ಅಭಿವೃದ್ಧಿಗಾಗಿ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ತಾಲೂಕಿನ ಪ್ರಥಮ ಪತ್ರಿಕೆ 'ಉಳ್ಳಾಲ ವಾಣಿ 'ಯನ್ನು ಸ್ಪೀಕರ್ ಯುಟಿ ಖಾದರ್ ಬಿಡುಗಡೆ ಮಾಡಿದರು.
ಕಾರ್ಯಕ್ರಮ ದಲ್ಲಿ ತಹಶೀಲ್ದಾರ್ ಪುಟ್ಟ ರಾಜು, ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತಡಿ, ನಗರ ಸಭೆ ಪೌರಾಯುಕ್ತ ವಾಣಿ ಆಳ್ವ, ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ತಾ.ಪಂ.ಇ.ಒ ಶೈಲಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಕಣಚೂರು ಮೋನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಇಬ್ರಾಹಿಂ ಕೋಡಿಜಾಲ್, ಹಳೆಕೋಟೆ ಶಾಲೆ ಮುಖ್ಯೋಪಾಧ್ಯಾಯ ಕೆಎಂಕೆ ಮಂಜನಾಡಿ, ಸುರೇಶ್ ಭಟ್ನಗರ, ಕಂದಾಯ ನಿರೀಕ್ಷಕ ಪ್ರಮೋದ್, ಉಪತಹಶೀಲ್ದಾರ್ ನವನೀತ್, ಮಾಳವ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ದೈಹಿಕ ಶಿಕ್ಷಕ ರಾದಮೋಹನ್ ಶಿರ್ಲಾಲ್ ಸ್ವಾಗತಿಸಿದರು, ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.