ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ನಳಿನ್ ಕುಮಾರ್ ಕಟೀಲ್ ಗೆ ಮತ್ತೆ ಟಿಕೆಟ್ ?
ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಬೆಂಬಲಿಸಿ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಸಭೆಯಲ್ಲಿ ವಿಜಯೇಂದ್ರ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯನ್ನು ಸಾರ್ವಜನಿಕ ವೇದಿಕೆಯಲ್ಲಿ ಪರೋಕ್ಷವಾಗಿ ಘೋಷಣೆ ಮಾಡಿದಂತಾಗಿದೆ.
ಮಂಗಳೂರಿನ ಸಿ.ವಿ.ನಾಯಕ್ ಸಭಾಂಗಣದಲ್ಲಿಂದು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಗೆ ರಾಜ್ಯದಲ್ಲಿ ಭದ್ರ ಬುನಾದಿಯನ್ನು ಹಾಕಿ ಕೊಟ್ಟ ಜಿಲ್ಲೆ. ಯಡಿಯೂರಪ್ಪರಿಗೂ ಸ್ಫೂರ್ತಿ ನೀಡಿದ ಜಿಲ್ಲೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಪಕ್ಷದ ಕಾರ್ಯ ಕರ್ತರಿಗೆ ಹೆಚ್ಚಿನ ಮನ್ನಣೆ ನೀಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ರಾಜ್ಯದ ಎಲ್ಲಾ ಸ್ಥಾನ ಗಳಲ್ಲಿಯೂ ಬಿಜೆಪಿ ಜಯಗಳಿಸಬೇಕೆನ್ನುವುದು ನಮ್ಮ ಗುರಿಯಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಸ್ಪೀಕರ್ ಬಗ್ಗೆ ಝಮೀರ್ ಅಹ್ಮದ್ ಆಡಿದ ಮಾತುಗಳಿಗಾಗಿ ಅವರು ರಾಜೀನಾಮೆ ನೀಡಬೇಕು. ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಝಮೀರ್ ಅಹ್ಮದ್ ಭಾಗವಹಿಸುವುದನ್ನು ತಡೆಯುವುದಾಗಿ ವಿಜಯೇಂದ್ರ ಸಭೆಯಲ್ಲಿ ಘೋಷಿಸಿದ್ದಾರೆ.
ಸಭೆಯಲ್ಲಿ ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮೊದಲಾದವರು ಉಪಸ್ಥಿತರಿದ್ದರು.