ಮಂಗಳೂರು | ಬ್ಯಾರೀಸ್ ಇನ್ಸ್ಟಿಟ್ಯೂಟ್ ನಲ್ಲಿ ವಿಪತ್ತು ಜಾಗೃತಿ ಕಾರ್ಯಕ್ರಮ
ಮಂಗಳೂರು : ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗ ಮತ್ತು IEEE ಮಂಗಳೂರು ಉಪವಿಭಾಗದ ಸಹಭಾಗಿತ್ವದಲ್ಲಿ ವಿಪತ್ತು ಜಾಗೃತಿ ಕಾರ್ಯಕ್ರಮವು ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸೆಮಿನಾರ್ ಹಾಲ್ ನಲ್ಲಿ ನಡೆಯಿತು.
IEEE ಇಂಡಿಯಾ ರಾಜ್ಯ ಸಂಯೋಜಕರಾದ ಸ್ವರಾಜ್ ಹೆಚ್ ವಿ ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ನೀಡಿದ್ದು, ವಿಪತ್ತು ನಿರ್ವಹಣೆಯ ಪ್ರಮುಖ ಅಂಶಗಳಾದ ಪೂರ್ವಭಾವಿ ಕ್ರಮಗಳು, ತುರ್ತು ಪ್ರತಿಕ್ರಿಯೆ ಮತ್ತು ವಿಪತ್ತು ನಿರ್ವಹಣೆಯಲ್ಲಿ ತಂತ್ರಜ್ಞಾನದ ಪಾತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು. IEEEಯ ಕಾರ್ಯರೂಪಗಳ ಬಗ್ಗೆ ಮಾಹಿತಿಯನ್ನು ನೀಡಿ ವಿಪತ್ತು ನಿರ್ವಹಣೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಅವರು ಪ್ರೇರೇಪಿಸಿದರು.
ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಸಿಇ ವಿಭಾಗದ ಮುಖ್ಯಸ್ಥ ಡಾ. ಅಬ್ದುಲ್ಲಾ ಗುಬ್ಬಿ ಸ್ವಾಗತಿಸಿ, ಇಸಿಇ ವಿಭಾಗದ ವಿದ್ಯಾರ್ಥಿ ಅಮನ್ ಅವರು ಅತಿಥಿಗಳನ್ನು ಪರಿಚಯಿಸಿದರು. ಭೌತಶಾಸ್ತ್ರ ವಿಭಾಗದ ಡಾ. ವಿನುತ ಅವರು ವಂದಿಸಿದರು.