ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕೃಷಿಕರಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ
ಸ್ಪೀಕರ್ ಯುಟಿ ಖಾದರ್ ರಿಗೆ ಸನ್ಮಾನ
ಉಳ್ಳಾಲ: ಸಹಕಾರಿ ಕ್ಷೇತ್ರ ರೈತರ, ಸಮಾಜದ ಅಭಿವೃದ್ಧಿಗೆ ಪೂರಕ ಕೆಲಸ ಮಾಡುತ್ತಿದ್ದು, ಇದರಿಂದ ಬಹಳಷ್ಟು ರೈತರಿಗೆ ಅನುಕೂಲ ಆಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಕೂಡಾ ಅಗತ್ಯ ಎಂದು ವಿಧಾನ ಸಭಾ ಅಧ್ಯಕ್ಷ ಯುಟಿ ಖಾದರ್ ಹೇಳಿದರು
ಅವರು ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಆಶ್ರಯದಲ್ಲಿ ಸಂಘದ ಸಭಾಭವನದಲ್ಲಿ ನಡೆದ ಭತ್ತದ ಕೃಷಿಕರಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ ದಲ್ಲಿ ಮಾತನಾಡಿದರು.
ಕೆಲವು ಕಡೆಬಹಳಷ್ಟು ಬರಡು ಭೂಮಿ ಇದೆ. ಈ ಭೂಮಿ ಯಲ್ಲಿ ಭತ್ತ ಬೆಳೆಸುವ ಕಾರ್ಯ ಆಗಬೇಕು. ಅದೇ ರೀತಿ ಶಿಕ್ಷಣ ಕ್ಷೇತ್ರಕ್ಕೂ ಪ್ರೋತ್ಸಾಹ ಸದಾ ಇರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಸಭಾ ಅಧ್ಯಕ್ಷ ಯುಟಿ ಖಾದರ್, ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಆಬ್ಬಕ ಚಾನೆಲ್ ನಿರ್ದೇಶಕ ಶಶಿಧರ್ ಪೊಯ್ಯತಬೈಲ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಅತ್ಯಧಿಕ ಅಂಕಗಳನ್ನು ಗಳಿಸಿದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಶೇಕಡ 100 ಫಲಿತಾಂಶ ಪಡೆದ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾತನಾಡಿ, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ ಕೃಷಿಕರಿಗೆ ಹೆಚ್ಚು ಪ್ರೋತ್ಸಾಹ ನೀಡಿ ಮಾದರಿಯಾಗಿದೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಗುತ್ತು ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಅತಿಥಿ ಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಸೋಮೇಶ್ವರ ದೇವಸ್ಥಾನ ದ ಆಡಳಿತ ಮೊಕ್ತೇಸರ ರವೀಂದ್ರ ನಾಥ ರೈ, ಪ್ರಗತಿ ಪರ ಕೃಷಿಕ ಅಬೂಸಾಲಿ ಕುರಿಯಕಾರ್, ಸಂಘದ ಉಪಾಧ್ಯಕ್ಷ ಅಬೂಸಾಲಿ ಕೆ.ಬಿ., ನಿರ್ದೇಶಕ ರಾದ ಪದ್ಮಾವತಿ ಶೆಟ್ಟಿ, ರಾಘವೇಂದ್ರ ರಾವ್, ಕೃಷ್ಣಪ್ಪ ಸಾಲಿಯಾನ್, ಗಂಗಾಧರ ಉಳ್ಳಾಲ, ಉದಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು,ಬಾಬು ನಾಯ್ಕ್, ಕಿರಣ್ ಕುಮಾರ್ ಶೆಟ್ಟಿ, ನಾರಾಯಣ ತಲಪಾಡಿ,ಮಾಜಿ ಅಧ್ಯಕ್ಷ ಹರ್ಷರಾಜ್ ಮುದ್ಯ,ಸವಿತ್ರ ರೈ ,ಬ್ಲಾಕಾ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು. ಪೊಸಕುರಲ್ ನಿರ್ದೇಶಕ ವಿದ್ಯಾಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಕೃಷ್ಣಪ್ಪ ಸಾಲಿಯಾನ್ ವಂದಿಸಿದರು.