ಗ್ರಾ. ಪಂ. ಚುನಾವಣೆ/ಉಪ ಚುನಾವಣೆ: ನಿಷೇಧಾಜ್ಞೆ
ಮಂಗಳೂರು: ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಪ್ಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ.
ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಮತದಾನ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಆದೇಶಿಸಿದ್ದಾರೆ.
Next Story