Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರೀಕ್ಷೆಯಲ್ಲಿ ಅಂಕವೇ ಮಾನದಂಡವಲ್ಲ...

ಪರೀಕ್ಷೆಯಲ್ಲಿ ಅಂಕವೇ ಮಾನದಂಡವಲ್ಲ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯತೆಯಿದೆ: ವಿಠಲ್ ನಾಯಕ್

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳ ಪದಗ್ರಹಣ, ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ5 Nov 2023 4:56 PM IST
share
ಪರೀಕ್ಷೆಯಲ್ಲಿ ಅಂಕವೇ ಮಾನದಂಡವಲ್ಲ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯತೆಯಿದೆ: ವಿಠಲ್ ನಾಯಕ್

ಕಾರ್ಕಳ: ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷೆಯಲ್ಲಿ ಅಂಕ ಗಳಿಸುವತ್ತ ಮಾತ್ರವೇ ಮಕ್ಕಳನ್ನು ಜೀವನದ ಪರೀಕ್ಷೆಯನ್ನು ಎದುರಿಸುವಲ್ಲಿ ಮೌಲ್ಯಾಧಾರಿತ ಶಿಕ್ಷಣದ ಕೊರತೆಯಿದೆ ಎಂದು ಖ್ಯಾತ ವಿದ್ವಾಂಸ ಹಾಗೂ ಶಿಕ್ಷಕ ವಿಠಲ್ ನಾಯಕ್ ಹೇಳಿದರು.

ಅವರು ಜೋಡುರಸ್ತೆ ಕುಲಾಲ ಸಭಾಭವನದಲ್ಲಿ ನ.5 ರಂದು ಭಾನುವಾರ ನಡೆದ ಹೆಬ್ರಿ ಮತ್ತು ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, ಮಕ್ಕಳ ಚಿತ್ರಕಲಾ ಸ್ಪರ್ಧೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಂಗವಾಗಿ ದಿಕ್ಸೂಚಿ ಭಾಷಣ ಕಾರರಾಗಿ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿ ಆಗ ಅವರ ಭವಿಷ್ಯ ಉಜ್ವಲ ವಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ಶೇಖರ ಕಡ್ತಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮುದಾಯದ ಅಭಿವೃದ್ದಿಗೆ ಸಂಘಟ ನೆಯ ಅಗತ್ಯತೆಯಿದೆ, ಮರಾಠಿ ಸಮುದಾಯವು ಇಂದು ಶಿಕ್ಷಣ, ಉದ್ಯಮ, ವೃತ್ತಿ ಬದುಕಿನಲ್ಲಿ ಮುಂಚೂಣಿಯಲ್ಲಿದೆ. ಮಕ್ಕಳಿಗೆ ಸಂಘಟನೆಯ ಮಹತ್ವದ ಜತೆಗೆ ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಹೊಣೆಗಾರಿಕೆ ಪೋಷಕರ ದ್ದಾಗಿದೆ ಎಂದರು.

ಮುಖ್ಯ ಅತಿಗಳಾಗಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ನ ನಿವೃತ್ತ ಪ್ರಾದೇಶಿಕ ನಿರ್ದೇಶಕ ವಿ.ಪಿ ನಾಯ್ಕ್, ಮಂಗಳೂರು, ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಉಮೇಶ್ ನಾಯ್ಕ್, ಮುಂಬಯಿ ಉದ್ಯಮಿ ಸುಧಾಕರ ನಾಯ್ಕ್, ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ವಿ.ಸುಧಾಕರ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿ.ಸುಧಾಕರ ನಾಯ್ಕ್, ಪ್ರಧಾನ ಕಾರ್ಯದರ್ಶಿ ಹರೀಶ್ ಇರ್ವತ್ತೂರು, ಕೋಶಾಧಿಕಾರಿ ಶ್ರೀನಿವಾಸ ನಾಯ್ಕ್, ಜತೆ ಕಾರ್ಯದರ್ಶಿ ಅಶೋಕ್ ನಾಯ್ಕ್, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯ ದರ್ಶಿ ಪವನ್ ನಾಯ್ಕ್, ಸಂಘಟನಾ ಕಾರ್ಯದರ್ಶಿ ಅಶೋಕ್ ನಾಯ್ಕ್, ಯುವ ವೇದಿಕೆ ಅಧ್ಯಕ್ಷ ನಾಗೇಂದ್ರ ಹೆಬ್ರಿ, ಮಹಿಳಾ ವೇದಿಕೆ ಅಧ್ಯಕ್ಷೆ ಶಶಿಕಲಾ ಮುಂತಾದವರು ಹಾಜರಿದ್ದರು.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಇರ್ವತ್ತೂರು ಪ್ರಸ್ತಾವನೆಗೈದರು.

ಸುಗಂಧಿ ನಾಯ್ಕ್ ಶಿವಪುರ ಸ್ವಾಗತಿಸಿ,ಅಶೋಕ್ ನಾಯ್ಕ್ ಕುಕ್ಕುಜೆ ವಂದಿಸಿದರು. ಪದ್ಮಾಕರ್ ನಾಯ್ಕ್, ರೇವತಿ ದುರ್ಗ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ವರಿ ಸನ್ಮಾನ ಪತ್ರ ವಾಚಿಸಿದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X