Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ:...

ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ9 March 2025 2:10 PM IST
share
ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಮಂಗಳೂರು, ಮಾ.9: ನಿಗೂಢವಾಗಿ ನಾಪತ್ತೆಯಾಗಿ ಇದೀಗ ಪೊಲೀಸರ ಕೈಗೆ ಬಿದ್ದಿರುವ ವಿದ್ಯಾರ್ಥಿ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ದಿಗಂತ್ನನ್ನು ಬುಧವಾರ(ಮಾ.12) ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಜಿಲ್ಲಾ ಎಸ್ಪಿ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಿಗಂತ್ ಪತ್ತೆಗಾಗಿ ಆತನ ಹೆತ್ತವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಕಾರಣ ಆತನನ್ನು ಪೊಲೀಸರು ಹೈಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ. ಸದ್ಯ ಆತನನ್ನು ಸಿಡಬ್ಲ್ಯುಸಿ ಬಾಲಕರ ಬಾಲ ಮಂದಿರಕ್ಕೆ ಸೇರಿಸಲಾಗಿದೆ ಎಂದರು.

ದಿಗಂತ್

ದ್ವಿತೀಯ ಪಿಯುಸಿ ಪಿಸಿಎಂಬಿ ಪರೀಕ್ಷೆಗೆ ಸರಿಯಾಗಿ ತಯಾರಿ ಮಾಡದ ಕಾರಣ ಭಯಭೀತನಾಗಿ ಮನೆ ಬಿಟ್ಟು ಹೋಗಿರುವುದಾಗಿ ದಿಗಂತ್ ತನಿಖೆಯ ವೇಳೆ ಮಾಹಿತಿ ನೀಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.

ದಿಗಂತ್ ಫೆ.25ರಂದು ಮಂಗಳೂರಿನಿಂದ ಮನೆಗೆ ಬಂದು 500 ರೂ. ತೆಗೆದುಕೊಂಡು ಅಲ್ಲಿಂದ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಅರ್ಕುಳಕ್ಕೆ ತೆರಳಿ, ಅಲ್ಲಿಂದ ಬೈಕ್ ಹಿಡಿದು ಮಂಗಳೂರು ಖಾಸಗಿ ಬಸ್ ನಿಲ್ದಾಣ ತಲುಪಿದ್ದನು. ಬಳಿಕ ಶಿವಮೊಗ್ಗ ಬಸ್ ಹತ್ತಿದ್ದಾನೆ. ಶಿವಮೊಗ್ಗದಿಂದ ರೈಲಿನಲ್ಲಿ ಮೈಸೂರಿಗೆ ತೆರಳಿ, ಅಲ್ಲಿಂದ ಕೆಂಗೇರಿಗೆ ಹೋಗಿ ಅಲ್ಲಿ ರೆಸಾರ್ಟ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದನು. ಅಲ್ಲಿ ಸ್ವಲ್ಪ ಹಣ ಗಳಿಸಿ ಅಲ್ಲಿಂದ ವಾಪಸ್ ಅದೇ ರೂಟ್ ನಲ್ಲಿ ಉಡುಪಿಗೆ ಆಗಮಿಸಿದ್ದನು. ಉಡುಪಿಯಲ್ಲಿ ಅಂಗಡಿಯೊಂದರಿಂದ ಬಟ್ಟೆ ಖರೀದಿಸಿ ಹಣವಿಲ್ಲದ ಕಾರಣ ಅಲ್ಲಿಂದ ಓಡಲು ಯತ್ನಿಸಿದ್ದಾನೆ. ಆಗ ಆತನನ್ನು ಹಿಡಿದು ವಿಚಾರಿಸಿದಾಗ ಕಾಣೆಯಾಗಿರುವ ವಿದ್ಯಾರ್ಥಿ ದಿಗಂತ್ ಎಂಬ ವಿಚಾರ ಸ್ಥಳೀಯರಿಗೆ ಗೊತ್ತಾಗಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಡುಪಿ ಪೊಲೀಸರು ಆತನನ್ನು ವಶಕ್ಕೆ ಪಡೆದು ಮಂಗಳೂರಿನ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ ಎಂದು ಎಸ್ಪಿ ಯತೀಶ್ ತಿಳಿಸಿದರು.

ದಿಗಂತ್ ಮನೆಯಿಂದ ಹೊರಟು ರೈಲು ಹಳಿ ತಲುಪಿದಾಗ ಅಲ್ಲಿ ತನ್ನ ಮೊಬೈಲ್ ಫೋನ್, ಚಪ್ಪಲಿಯನ್ನು ತೊರೆದಿದ್ದಾನೆ. ಹಾಗೂ ಪತ್ರವೊಂದನ್ನು ಎಸೆದು ಹೋಗಿದ್ದಾನೆ. ಈ ಮಧ್ಯೆ ಕಾಲಿನ ಹಿಮ್ಮಡಿಗೆ ಆಗಿದ್ದ ಗಾಯದಿಂದ ಒಸರುತ್ತಿದ್ದ ರಕ್ತವನ್ನು ಚಪ್ಪಲಿಗೆ ಒರೆಸಿದ್ದಾಗಿ ದಿಗಂತ್ ತಿಳಿಸಿದ್ದಾನೆ ಎಸ್ಪಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಡಿಷನಲ್ ಎಸ್ಪಿ ರಾಜೇಂದ್ರ, ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್, ಬಂಟ್ವಾಳ ಗ್ರಾಮಾಂತರ ಸಿಪಿಐ ಶಿವಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X