ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಗೀತಾ ಭಂಡಾರಿ ಆಯ್ಕೆ

ಕೊಣಾಜೆ : ಬಾಳೆಪುಣಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಗೀತಾ ಭಂಡಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುರುವಾರ ಬಾಳೆಪುಣಿ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಹೈದರ್ ಕೈರಂಗಳ, ಅಬ್ದುಲ್ ಜಲೀಲ್ ಮೋಂಟುಗೋಳಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಪಿ, ಪಂಚಾಯತಿ ಕಾರ್ಯದರ್ಶಿ ಆಯಿಶಾ ಬಾನು ಬಿಎ, ಪಂಚಾಯತ್ ಸಿಬ್ಬಂದಿಗಳು ಹಾಗೂ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು. ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆ ಎ.3 ರಂದು ನಡೆಯಲಿದೆ.
ಈ ಹಿಂದೆ ಪಂಚಾಯತ್ ನ ಅಧ್ಯಕ್ಷರಾಗಿ ಸುಕನ್ಯ ರೈ ಹಾಗೂ ಉಪಾಧ್ಯಕ್ಷರಾಗಿ ಬಶೀರ್ ಅವರು ಕಾರ್ಯನಿರ್ವಹಿಸಿದ್ದರು.
Next Story