Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಮಾರ್ಟ್ ಸಿಟಿ ‘ವಾಟರ್ ಫ್ರಂಟ್’...

ಸ್ಮಾರ್ಟ್ ಸಿಟಿ ‘ವಾಟರ್ ಫ್ರಂಟ್’ ಯೋಜನೆಗೆ ಚುರುಕು ನೀಡಿ: ನಳಿನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Oct 2023 8:29 PM IST
share
ಸ್ಮಾರ್ಟ್ ಸಿಟಿ ‘ವಾಟರ್ ಫ್ರಂಟ್’ ಯೋಜನೆಗೆ ಚುರುಕು ನೀಡಿ: ನಳಿನ್ ಕುಮಾರ್

ಮಂಗಳೂರು, ಅ.17 ಮಂಗಳೂರು ಸ್ಮಾರ್ಟ್‌ಸಿಟಿಯ ವಾಟರ್ ಫ್ರಂಟ್(ಜಲಾಭಿಮುಖಿ) ಯೋಜನೆಗಳಿಗೆ ಚುರುಕು ನೀಡುವ ನಿಟ್ಟಿನಲ್ಲಿ ಮೆರಿಟೈಂ ಮಂಡಳಿಯ ಅಧಿಕಾರಿಗಳು ತಕ್ಷಣ ಯೋಜನಾ ಪ್ರದೇಶದಲ್ಲಿ ಲೀಸ್ ಮುಕ್ತಾಯಗೊಂಡ 19 ಆಸ್ತಿಗಳ ಪಟ್ಟಿ ಹಾಗೂ ಸ್ಮಾರ್ಟ್ ಸಿಟಿ ಕೆಲಸ ನಡೆಸುವ ಬಗ್ಗೆ ಪತ್ರ ನೀಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿಗಳಿಗೆ ವೇಗ ನೀಡುವ ಸಲುವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್‌ಸಿಟಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಕಾಮಗಾರಿಗಳಿಗೆ ವೇಗ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಸಲ್ಲದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ್ ಕೆ. ಮಾತನಾಡಿ ಬಂದರು ಇಲಾಖೆಗೆ ಸೇರಿದ ನದಿ ದಡದ ಜಮೀನನ್ನು ವಾರ್ಷಿಕ ಲೀಸ್ ಆಧಾರದಲ್ಲಷ್ಟೇ ನೀಡಲಾಗಿತ್ತು, ಅವುಗಳೆಲ್ಲವೂ ಅವಧಿ ಪೂರ್ಣಗೊಳಿಸಿವೆ. ಆದರೆ ಅದರಲ್ಲೊಬ್ಬ ವ್ಯಕ್ತಿ ತಮ್ಮ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿರುವುದಾಗಿ ಆರೋಪಿಸಿ ಜಿಲ್ಲಾಧಿಕಾರಿಯನ್ನೇ ಪಾರ್ಟಿ ಮಾಡಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದ ಕಾಮಗಾರಿಗೆ ಅಡ್ಡಿಯಾಗಬಹುದು ಎಂದರು.

ಮೆರಿಟೈಂ ಮಂಡಳಿಯ ಅಧಿಕಾರಿಗಳು ಇದರ ಬಗ್ಗೆ ಯಾಕೆ ಕ್ರಮ ಕೈಗೊಳ್ಳಲಿಲ್ಲ. ಸ್ಮಾರ್ಟ್‌ಸಿಟಿ ಅಧಿಕಾರಿಗಳು ಪೊಲೀಸ್ ಇಲಾಖೆಯ ನೆರವು ಪಡೆದುಕೊಂಡು ಕೆಲಸ ಮುಂದುವರಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಈ ಸಂದರ್ಭ ಮಧ್ಯಪ್ರವೇಶಿಸಿದ ಶಾಸಕ ವೇದವ್ಯಾಸ ಕಾಮತ್ ಬಂದರು ಇಲಾಖೆಗೆ ಕನಿಷ್ಠ ಜುಜುಬಿ ಮೊತ್ತವನ್ನು ನೀಡಿ ಈ ಜಾಗವನ್ನು ಬರ್ತ್‌ಡೇ ಪಾರ್ಟಿಗಳಿಗೆ ನೀಡಿ ಭರ್ಜರಿಯಾಗಿ ಹಣ ಮಾಡುವವರು ಇಲ್ಲಿದ್ದಾರೆ ಎಂದು ಆರೋಪಿಸಿದರು.

ಕರಾವಳಿ ಸರ್ಕಲ್-ಪಂಪ್‌ವೆಲ್ ರಸ್ತೆ ಕೆಲಸವೂ ಬಾಕಿ ಇದೆ. ಅದನ್ನು ತ್ವರಿತಗೊಳಿಸಬೇಕು ಎಂದು ವೇದವ್ಯಾಸ ಕಾಮತ್ ಒತ್ತಾಯಿಸಿದರು.

*ಪಡೀಲ್-ಪಂಪ್‌ವೆಲ್ ಚತುಷ್ಪಥ ಕಾಮಗಾರಿಯನ್ನು ಪೂರ್ಣಗೊಳಿಸಲು ಗೈಲ್ ಪೈಪ್‌ಲೈನ್‌ನವರಿಂದ ತಡೆಯುಂಟಾಗು ತ್ತಿದೆ. ಜಲಸಿರಿಯವರ ಪೈಪ್‌ಲೈನ್ ಕೆಲಸವೂ ಅಡ್ಡಿಯಾಗುತ್ತಿದೆ. ಇದೆಲ್ಲವನ್ನೂ ಸಮರ್ಪಕವಾಗಿ ಮಾತುಕತೆ ನಡೆಸಿ ಕೊಂಡು ಜನವರಿ 25ರೊಳಗೆ ಪೂರ್ಣಗೊಳಿಸಬೇಕು ಎಂದು ನಳಿನ್ ಸೂಚಿಸಿದರು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಮೀನುಗಾರಿಕಾ ಕಾಲೇಜಿಗೆ 2.35 ಕೋ.ರೂ. ಅನುದಾನ ಸ್ಮಾರ್ಟ್‌ ಸಿಟಿಯಡಿ ನೀಡಿದ್ದರೂ ಅದರ ಸದ್ವಿನಿಯೋಗ ಮಾಡುತ್ತಿಲ್ಲ ಎಂದರು. ಸಭೆಯಲ್ಲಿ ಮನಪಾ ಆಯುಕ್ತ ಆನಂದ್ ಸಿ.ಎಲ್. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X