ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ʼಗೂಗಲ್ ಡೆವಲಪರ್ ಗ್ರೂಪ್ʼ ಉದ್ಘಾಟನೆ
ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ʼಗೂಗಲ್ ಡೆವಲಪರ್ ಗ್ರೂಪ್ʼ(GDG) ಉದ್ಘಾಟನಾ ಸಮಾರಂಭ ನಡೆಯಿತು.
ಡಾ.ಎಸ್.ಐ.ಮಂಝೂರ್ ಬಾಷಾ ಅವರು ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿದ್ದು, ಸಿಎಸ್ ಇ ವಿಭಾಗದ ಪ್ರಾಧ್ಯಾಪಕ ಡಾ.ಅಝೀಝ್ ಮುಸ್ತಫಾ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಕಾರ್ಯಕ್ರಮವನ್ನು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಅಬ್ದುಲ್ಲಾ ಗುಬ್ಬಿ ಸಂಯೋಜಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್(ಎಐ & ಡಿಎಸ್) ವಿಭಾಗದ ಮುಖ್ಯಸ್ಥರಾದ ಡಾ.ಮುಜಾವರ್, ಸಂಶೋಧನಾ ಪ್ರಬಂಧಗಳನ್ನು ಬರೆಯುವ ಬಗೆಗಿನ ಮಹತ್ವವನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟಿದ್ದಾರೆ.
ಕಾರ್ಯಕ್ರಮವನ್ನು ಇಸಿಇ ವಿಭಾಗದ ತಾಸೀನ್ ಅವರು ನಿರೂಪಣೆ ಮಾಡಿದ್ದಾರೆ. ಈ ವೇಳೆ ವಿವಿಧ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Next Story