ಪ್ರಜಾಪ್ರಭುತ್ವ ದಿನಾಚರಣೆ| ಮಾನವ ಸರಪಳಿ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಬ್ರಾಂಡ್ ಅಂಬಾಸಿಡರ್
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್ನಿಂದ ಚಾಮರಾಜ ನಗರದವರೆಗೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ರಾಜ್ಯ ಸರಕಾರವು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದೆ.
ಆ ಹಿನ್ನೆಲೆಯಲ್ಲಿ ಹರೇಕಳ ಹಾಜಬ್ಬ ಅವರ ಜೊತೆ ದ.ಕ.ಜಿಲ್ಲಾಧಿಕಾರಿ ಚರ್ಚೆ ನಡೆಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಮೂಲ್ಕಿಯಿಂದ ಮಂಗಳೂರು, ಬಂಟ್ವಾಳ, ಸುಳ್ಯ, ಸಂಪಾಜೆವರೆಗೆ ರಾ.ಹೆ.ಯಲ್ಲಿ 130 ಕಿ.ಮೀ.ವರೆಗೆ ನಡೆಯುವ ಮಾನವ ಸರಪಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹರೇಕಳ ಹಾಜಬ್ಬ ಅವರು ಮನವಿ ಮಾಡಿದ್ದಾರೆ.
Next Story