ದ.ಕ. ಸಹಿತ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಆರೆಂಜ್ ಅಲರ್ಟ್ ಘೋಷಣೆ
ಮೀನುಗಾರರಿಕೆ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಮಂಗಳೂರು: ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ., ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.
ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮೀನುಗಾರರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
Next Story