ಸೌಜನ್ಯಾ ಪರ ಹಕ್ಕೊತ್ತಾಯ ಸಭೆಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ
ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎ.6ರಂದು ಧರ್ಮಸ್ಥಳದಿಂದ ಬೆಳ್ತಂಗಡಿ ವರೆಗೆ ನಡೆಸಲು ನಿರ್ಧರಿಸಲಾಗಿದ್ದ ಜಾಥಾ ಹಾಗೂ ಹಕ್ಕೊತ್ತಾಯ ಸಭೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಆರಂಭದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸ್ ಆ್ಯಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳನ್ನು ಪರಿಶೀಲಿಸಿ ಅದರ ಗಂಭೀರತೆ ಅರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ.
ಉದ್ದೇಶಿತ ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದ ನ್ಯಾಯಪೀಠ ಆರಂಭದಲ್ಲಿ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ತಾತ್ಕಾಲಿಕ ತಡೆಯಾಜ್ಞೆ ಮುಂದಿನ ವಿಚಾರಣೆಯ ತನಕ ಜಾರಿಯಲ್ಲಿರುತ್ತದೆ. ಈ ಪ್ರಕರಣದಲ್ಲಿ ಧರ್ಮಸ್ಥಳದ ಪರವಾಗಿ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಮತ್ತು ವಕೀಲ ರಾಜಶೇಖರ್ ಹಿಳಿಯಾರು ವಾದಿಸಿದ್ದರು.
Next Story