ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಇಬ್ರಾಹಿಂ ಕೆ.ಮಾಣಿ ಉಪಾಧ್ಯಕ್ಷರಾಗಿ ಸುಜಾತಾ ಆಯ್ಕೆ
ಬಂಟ್ವಾಳ : ಮಾಣಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಹಾಜಿ. ಇಬ್ರಾಹಿಂ ಕೆ.ಮಾಣಿ ಹಾಗೂ ಉಪಾಧ್ಯಕ್ಷರಾಗಿ ಸುಜಾತಾ ಆಯ್ಕೆಯಾಗಿದ್ದಾರೆ.
ಮಾಣಿ ಗ್ರಾಮ ಪಂಚಾಯತ್ ಒಟ್ಟು 10 ಸದಸ್ಯರನ್ನು ಹೊಂದಿದ್ದು ಈ ಪೈಕಿ 8 ಮಂದಿ ಕಾಂಗ್ರೆಸ್ ಬೆಂಬಲಿತ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಸದಸ್ಯರಾಗಿ ಆಯ್ಕೆಯಾಗಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಇಬ್ರಾಹಿಂ ಕೆ ಮಾಣಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸುಜಾತಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾದರು.
ಜಿ.ಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ.ಕೆ.ನಾಯ್ಕ್ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು, ಬಂಟ್ವಾಳ ತಾಲೂಕು ಇಂಜಿನಿಯರ್ ವಿಭಾಗದ ಕೃಷ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ ಹಾಗೂ ಸೀತಾ ಉಪಸ್ಥಿತರಿದ್ದರು.