ಅಸೈ ಸರಕಾರಿ ಮುಸ್ಲಿಂ ವಸತಿಶಾಲೆಯಲ್ಲಿ ಔಷಧೀಯ ವನ ಉದ್ಘಾಟನೆ
ಕೊಣಾಜೆ, ಆ.14: ಅಸೈ ಮದಕದ ಸರಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಯೆನೆಪೋಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ನರಿಂಗಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಔಷದೀಯ ವನದ ಉದ್ಘಾಟನಾ ಕಾರ್ಯ ಕ್ರಮ ಮತ್ತು ವೈದ್ಯಕೀಯ ತಪಾಸಣಾ ಶಿಬಿರವು ವಸತಿ ಶಾಲೆಯಲ್ಲಿ ನಡೆಯಿತು.
ಶಾಲೆಯ ಪ್ರಾಂಶುಪಾಲ ಉಮರಬ್ಬ ಅಧ್ಯಕ್ಷತೆ ವಹಿಸಿದ್ದರು. ಮಂಜನಾಡಿ ಗ್ರಾಪಂ ಅಧ್ಯಕ್ಷೆ ಕೌಸರ್ ಬಾನು ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಕೀಯ ಮಹಾ ವಿದ್ಯಾಲಯದ ದ್ರವ್ಯಗುಣ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಮತ್ತು ವಿಭಾಗದ ಮುಖ್ಯಸ್ಥ ಡಾ. ಆಶಾ ಮಾರಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ. ಶಿಲ್ಪಾಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಔಷಧೀಯ ಗಿಡಗಳ ಬಗ್ಗೆ ಮಾಹಿತಿ ನೀಡಿದರು. ಮಂಜನಾಡಿ ಗ್ರಾಪಂ ಸದಸ್ಯ ಮುಹಮ್ಮದ್ ಅಸೈ ಮಾತನಾಡಿದರು. ಶಿಕ್ಷಕರಾದ ಮುಹಮ್ಮದ್ ಹನೀಫ್ ಸ್ವಾಗತಿಸಿದರು. ಮಂಜುನಾಥ ಭಟ್ ವಂದಿಸಿದರು. ಶೋಭಾ ಎ. ಕಾರ್ಯಕ್ರಮ ನಿರೂಪಿಸಿದರು.
Next Story